ಭಾರತ – ಚೀನಾ ಸಹಕಾರವು 2.8 ಬಿಲಿಯನ್ ಜನರ ಹಿತಾಸಕ್ತಿಗೆ ಪೂರಕ-Narendra Modi
ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಮಹತ್ವವನ್ನು ಎರಡು ದೇಶಗಳು ಪಾಲಿಸಬೇಕಿದೆ

ಚೀನಾ ಆಯೋಜಿಸಿರುವ ಶಾಂಘೈ ಸಹಕಾರ ಸಂಘಟನೆಯ (SCO) ರಾಷ್ಟ್ರಗಳ ಮುಖ್ಯಸ್ಥರ ಶೃಂಗಸಭೆಯಲ್ಲಿ ಭಾಗವಹಿಸಲು ಟಿಯಾಂಜಿನ ನಗರಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಾರತೀಯ ಕಾಲಮಾನದ ಪ್ರಕಾರ ಇಂದು ಮುಂಜಾನೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕಳೆದ ವರ್ಷ ಕಜಾನ್‌ನಲ್ಲಿ, ನಾವು ಬಹಳ ಫಲಪ್ರದ ಚರ್ಚೆಗಳನ್ನು ನಡೆಸಿದ್ದೇವೆ, ಇದು ನಮ್ಮ ಸಂಬಂಧಗಳಿಗೆ ಸಕಾರಾತ್ಮಕ ನಿರ್ದೇಶನವನ್ನು ನೀಡಿತ್ತಲ್ಲದೇ ಗಡಿಯಲ್ಲಿ ಸಂಪರ್ಕ ಕಡಿತಗೊಂಡ ನಂತರ, ಶಾಂತಿ ಮತ್ತು ಸ್ಥಿರತೆಯ ವಾತಾವರಣವನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು. ಈ ಸಂದಭ೯ದಲ್ಲಿ ದ್ವಿಪಕ್ಷೀಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಸ್ಪರ ಗೌರವ, ಪರಸ್ಪರ ಆಸಕ್ತಿ ಮತ್ತು ಪರಸ್ಪರ ಸಂವೇದನೆ”ಯ ಆಧಾರದ ಮೇಲೆ ಭಾರತ ಮತ್ತು ಚೀನಾ ಮತ್ತು “ಅವರ 2.8 ಶತಕೋಟಿ” ಜನರ ನಡುವೆ “ಸ್ಥಿರ ಸಂಬಂಧ” ಅಗತ್ಯವಿದೆ ಎಂದು ಪ್ರತಿಪಾದಿಸಿದರು.
“ದ್ವಿಪಕ್ಷೀಯ ಸಂಬಂಧಗಳ ನಿರಂತರ ಅಭಿವೃದ್ಧಿಗಾಗಿ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಮಹತ್ವವನ್ನು ಎರಡು ದೇಶಗಳು ಪಾಲಿಸಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲಾಗಿದ್ದು, ಎರಡೂ ದೇಶಗಳ ನಡುವೆ ನೇರ ವಿಮಾನಯಾನವನ್ನು ಸಹ ಪುನರಾರಂಭಿಸಲಾಗುವುದು ಎಂದು ಹೇಳಿದರು. ಮತ್ತೊಮ್ಮೆ, ಚೀನಾಕ್ಕೆ ಭೇಟಿ ನೀಡಲು ಆಹ್ವಾನ ನೀಡಿದ್ದಕ್ಕಾಗಿ ಮತ್ತು ಇಂದಿನ ಸಭೆಗಾಗಿ ಚೀನಾ ಅಧ್ಯಕ್ಷರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವದಾಗಿ ಮೋದಿ ಹೇಳಿದರು.

ಭಾರತ ಮತ್ತು ಚೀನಾ ಎರಡೂ ಕಾರ್ಯತಂತ್ರದ ಸ್ವಾಯತ್ತತೆಯನ್ನು ಅನುಸರಿಸುತ್ತವೆ ಮತ್ತು ಅವುಗಳ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟರು. ಬಹುಪಕ್ಷೀಯ ವೇದಿಕೆಗಳಲ್ಲಿ ಭಯೋತ್ಪಾದನೆ ಮತ್ತು ನ್ಯಾಯಯುತ ವ್ಯಾಪಾರದಂತಹ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳು ಮತ್ತು ಸವಾಲುಗಳ ಕುರಿತು ಸಾಮಾನ್ಯ ನೆಲೆಯನ್ನು ವಿಸ್ತರಿಸುವುದು ಅಗತ್ಯವೆಂದು ಎರಡು ದೇಶಗಳ ನಾಯಕರು ಪರಿಗಣಿಸಿದರು ಎಂದು ಭಾರತೀಯ ವಿದೇಶಾಂಗ ಇಲಾಖೆಯ ಮೂಲಗಳು ತಿಳಿಸಿವೆ.
ಚೀನಾದ SCO ಅಧ್ಯಕ್ಷತೆ ಮತ್ತು ಟಿಯಾಂಜಿನ್‌ನಲ್ಲಿ ನಡೆಯಲಿರುವ ಶೃಂಗಸಭೆಗೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ, 2026 ರಲ್ಲಿ ಭಾರತ ಆಯೋಜಿಸಲಿರುವ ಬ್ರಿಕ್ಸ್ ಶೃಂಗಸಭೆಗೆ ಅಧ್ಯಕ್ಷ ಕ್ಸಿ ಜಿಂಗ್‌ಪಿಂಗ್ ಅವರನ್ನು ಆಹ್ವಾನಿಸಿದರು. ಆಹ್ವಾನ ನೀಡಿದ್ದಕ್ಕಾಗಿ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಪ್ರಧಾನ ಮಂತ್ರಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು ಮತ್ತು ಭಾರತದ ಬ್ರಿಕ್ಸ್ ಅಧ್ಯಕ್ಷತೆಗೆ ಚೀನಾದ ಬೆಂಬಲವನ್ನು ನೀಡುವದಾಗಿ ಅವರು ಇದೇ ವೇಳೆ ಹೇಳಿದರು.


