CrimeDistrictShivamogga

ಶಿವಮೊಗ್ಗ: ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ| ಕ್ಷುಲ್ಲಕ ಕಾರಣಕ್ಕೆ ಜಗಳ, ಮಾರಣಾಂತಿಕ ಹಲ್ಲೆ|ಮೂವರಿಗೆ ಐದು ವರುಷಗಳ ಕಾರಾಗೃಹ ಶಿಕ್ಷೆ|

ಕಳೆದ ದಿನಾಂಕ 20-03-2022 ರಂದು ಮನೆಗೆ ಬರುವ ಸಂದರ್ಭದಲ್ಲಿ ಬಾಬು ಕಿರಣ ಎಂಬುವವರಿಗೆ ಸಂತೋಷ, ಶರತ್‌ ಹಾಗೂ ಪ್ರಶಾಂತ್‌ ಎಂಬುವವರು ಕ್ಷುಲಕ ಕಾರಣಕ್ಕೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಮೂವರು ಆರೋಪಿಗಳಿಗೆ ಐದು ವರುಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ.

ಈ ಕುರಿತು ಶಿವಮೊಗ್ಗದ 1 ನೇ ಹೆಚ್ಚುವರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಭಯ್ ಧನಪಾಲ್ ಚೌಗಲ ಅವರು ಶನಿವಾರದಂದು ತೀರ್ಪು ನೀಡಿದ್ದಾರೆ.

ಶಿಕ್ಷೆಯ ಜೊತೆಯಲ್ಲಿ ೧೨ ಸಾವಿರ ದಂಡ ಸಹ ವಿಧಿಸಿರುವ ನ್ಯಾಯಾಧೀಶರು, ದಂಡ ಕಟ್ಟಲು ತಪ್ಪಿದ್ದಲ್ಲಿ ಮತ್ತೆ ಒಂದು ವರುಷ ಸಾಧಾ ಸಜೆಯನ್ನು ವಿಧಿಸಿ ಆದೇಶ ನೀಡಿದ್ದಾರೆ.

ಶಿವಮೊಗ್ಗ ನಗರ ಮಂಜುನಾಥ ಬಡಾವಣೆ ಮಹಾನಗರ ಪಾಲಿಕೆಯ ಖಾಲಿ ಜಾಗದಲ್ಲಿ ಕಳೆದ ದಿನಾಂಕ 20-03-2022 ರಂದು ಮನೆಗೆ ಬರುವ ಸಂದರ್ಭದಲ್ಲಿ ಬಾಬು ಕಿರಣ ಎಂಬುವವರಿಗೆ ಸಂತೋಷ, ಶರತ್‌ ಹಾಗೂ ಪ್ರಶಾಂತ್‌ ಎಂಬುವವರು ಕ್ಷುಲಕ ಕಾರಣಕ್ಕೆ ಜಗಳ ತೆಗೆದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗಿನ ತನಿಖಾಧಿಕಾರಿ ತಿಮ್ಮಪ್ಪ , ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಮತಾ ಬಿ.ಎಸ್ ವಾದ ಮಂಡಿಸಿದ್ದರು.

Follow Us

Leave a Reply

Your email address will not be published. Required fields are marked *

Back to top button