DistrictShivamogga

ಶಿವಮೊಗ್ಗ: ಕೇಂದ್ರ ಕಾರಾಗೃಹದಲ್ಲಿದ್ದ ಸಜಾ ಕೈದಿ ಸಾವು|10 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದ 73 ವಯಸ್ಸಿನ ಕೈದಿ ಬಸವ|ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬೆಳಗಿನ ಜಾವ ನಿಧನ..

ಸಜಾಬಂಧಿ ಬಸವ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ. 2019ರಲ್ಲಿ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದನು.

ಶಿವಮೊಗ್ಗ : ಇಲ್ಲಿಯ ಕೇಂದ್ರ ಕಾರಾಗೃಹದಲ್ಲಿ ಸಜಾ ಕೈದಿಯಾಗಿದ್ದ 78 ವಯಸ್ಸಿನ ಬಸವ ಎಂಬಾತ ಬುಧವಾರ ಬೆಳಗಿನ ಜಾವ ನಿಧನ ಹೊಂದಿದ್ದಾರೆ.

ವಯೋಸಹಜ ಕಾಯಿಲೆಗಳು ಹಾಗು ಮಧುಮೇಹ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಕೈದಿಗೆ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಹಾಗೂ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ಹೇಳಲಾಗಿದೆ.

ಮೃತ ಸಜಾಬಂಧಿ ಬಸವ

ಜನವರಿ 12ರ ರಾತ್ರಿ ಆರೋಗ್ಯ ಹದಗೆಟ್ಟಿದ್ದರಿಂದ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ 3 ಗಂಟೆ ಹೊತ್ತಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕರು ತಿಳಿಸಿದ್ದಾರೆ.

ಸಜಾಬಂಧಿ ಬಸವ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುತ್ತುತುಮ್ಮೆ ಗ್ರಾಮದ ನಿವಾಸಿ. 2019ರಲ್ಲಿ ನ್ಯಾಯಾಲಯದಿಂದ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದನು.

ಉಡುಪಿ ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಗಿತ್ತು ಎಂದು ಕಾರಾಗೃಹ ಮೂಲಗಳು ತಿಳಿಸಿವೆ.

Follow Us

Leave a Reply

Your email address will not be published. Required fields are marked *

Back to top button