CrimeDistrictHassanKarnatakaSpecial Stories

ಗಣೇಶ ವಿಸಜ೯ನಾ ಮೆರವಣಿಗೆ ಮೇಲೆ ನುಗ್ಗಿದ ಲಾರಿ-8 ಜನರ ಸಾವು, ಮೃತ ಕುಟುಂಬಕ್ಕೆ ತಲಾ 5 ಲಕ್ಷರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರದಂದು ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾಥಿ೯ಸಿರುವ ಸಿಎಂ, ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ 5 ಲಕ್ಷ ರೂ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಗಣೇಶ ವಿಸಜ೯ನಾ ಮೆರವಣಿಗೆ ಮೇಲೆ ಕ್ಯಾಂಟರ್‌ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಟ8 ಜನರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆ ಹೊಸಹಳ್ಳಿ ಗ್ರಾಮದ ರೇಲ್ವೆ ಗೇಟ್‌ ಬಳಿ ನಡೆದಿದೆ.

ಗಣೇಶ ವಿಸಜ೯ನಾ ಮೆರವಣಿಗೆ ಇಲ್ಲಿಯ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಸಾಗುತ್ತಿದ್ದ ಸಂದಭ೯ದಲ್ಲಿ ಬೈಕ್‌ ಅಡ್ಡ ಬಂದಿದ್ದನ್ನು ತಪ್ಪಿಸಲು ಹೋದ ಲಾರಿ ಚಾಲಕ , ರಸ್ತೆ ವಿಭಜಕ ದಾಟಿ ಮೆರವಣಿಗೆ ಮೇಲೆ ನೇರವಾಗಿ ನುಗ್ಗಿದೆ.

ಗಣೇಶ ವಿಸಜ೯ನಾ ಮೆರವಣಿಗೆ ಮೇಲೆ ನುಗ್ಗಿ ಬರುತ್ತಿರುವ ಕ್ಯಾಂಟರ್‌ ಲಾರಿ

ಇದರಿಂದ ಸ್ಥಳದಲ್ಲಿಯೇ 8 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. (ಶುಕ್ರವಾರ ತಡ ರಾತ್ರಿ 11.45ರ ತನಕ 8 ಜನರ ಸಾವಾಗಿತ್ತು.)

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸಂಸದ ಶ್ರೇಯಸ್‌ ಪಟೇಲ್‌ ಹಾಗೂ ಹೊಳೆನರಸೀಪುರ ಶಾಸಕ ಎಚ್‌ ಡಿ ರೇವಣ್ಣ ಭೇಟಿ ನೀಡಿದರು. ಇದು ಪೋಲಿಸ್‌ ವೈಫಲ್ಯದಿಂದ ನಡೆದ ಘಟನೆ ಎಂದು ಶಾಸಕ ರೇವಣ್ಣ ಸ್ಥಳದಲ್ಲಿದ್ದ ಪೊಲೀಸರ ಮೇಲೆ ಕಿಡಿಕಾರಿದರು.

ಇದೇ ವೇಳೆ ಕೇಂದ್ರ ಉಕ್ಕು ಖಾತೆ ಸಚಿವ ಎಚ್‌ ಡಿ ಕುಮಾರ್‌ಸ್ವಾಮಿ, ಗಣೇಶ್‌ ವಿಸಜ೯ನೆ ಮೆರವಣಿಗೆ ಸಂಭ್ರಮದ ವೇಳೆ ಇಂತಹ ಘಟನೆ ನಡೆಯಬಾರದಿತ್ತು. ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button