DistrictShivamogga

ಹೊಸನಗರ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್‌!ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಆಗ್ರಹ

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಿರ್ದೇಶನದಂತೆ ಕೆಲಸ ಮಾಡುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.

ಹೊಸನಗರ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿರುವ ಸಬ್‌ ಇನ್ಸ್‌ಪೆಕ್ಟರ್‌ ಕ್ರಮವನ್ನು ಸಹಿಸುವದಿಲ್ಲ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸನಗರ ಬಿಜೆಪಿ ಮಂಡಲದ ವತಿಯಿಂದ ಹೊಸನಗರ ಪೊಲೀಸ್‌ ಠಾಣೆ ಮುಂದೆ ಶನಿವಾರದಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಿರ್ದೇಶನದಂತೆ ಕೆಲಸ ಮಾಡುವ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.

ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಜಿಲ್ಲೆಯವರೇ ಆದ ಆರಗ ಜ್ಞಾನೇಂದ್ರ ಅಥವಾ ಆಗಿನ ಶಾಸಕ ಹರತಾಳು ಹಾಲಪ್ಪ ಎಂದಿಗೂ ಪೊಲೀಸ್‌ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿಲ್ಲ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸುವದರ ಹಿಂದೆ ಕಾಂಗ್ರೆಸ್‌ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಅವರ ಆಪ್ತರ ಕೈವಾಡವಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದರು.

ಕಾಂಗ್ರೆಸ್‌ ಸರ್ಕಾರದ ಕೈಗೊಂಬೆಯಾಗಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ನಮ್ಮ ಮೂವರು ಕಾರ್ಯಕರ್ತರ ಮೇಲೆ ಹೂಡಿರುವ ಪ್ರಕರಣದ ತನಿಖೆಯನ್ನು ಬೇರೆ ತನಿಖಾಧಿಕಾರಿ ಮೂಲಕ ಮಾಡಿಸಬೇಕೆಂದು ಅವರು ಆಗ್ರಹಿಸಿದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಶಾಸಕ ಗೋಪಾಲಕೃಷ್ಣ ಅವರು ಪೊಲೀಸರನ್ನು ಬಳಸಿಕೊಂಡು ಸುಳ್ಳು ಕೇಸ್‌ ಹಾಕಿಸುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆಂದು ಆರೋಪಿಸಿದರು. ಇಂತಹ ಗೊಡ್ಡು ಬೆದರಿಕೆಗೆ ನಮ್ಮ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಳಿಕ ಹೆಚ್ಚುವರಿ ಎಸ್‌ಪಿ ಎ.ಡಿ.ಕಾರ್ಯಪ್ಪ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಿ.ಎಸ್‌.ಅರುಣ್‌ , ಎಸ್.ಎನ್‌,ಚೆನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್.ಜಗದೀಶ್‌, ಟಿ.ಟಿ.ಮೇಘರಾಜ್‌ ಸೇರಿದಂತೆ ಅನೇಕ ಮುಖಂಡರು, ಕಾರ್ಯರ್ತರು ಇದ್ದರು.

Follow Us

Leave a Reply

Your email address will not be published. Required fields are marked *

Back to top button