NationalNew Delhi

ಕಾಂಗ್ರೆಸ್‌ ಪಕ್ಷವು ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಿದೆ|ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷ ಬೆಂಬಲಿಸಿ|ಮುಸಲ್ಮಾನ ಬಾಂಧವರಿಗೆ ಶಾಕೀರ್‌ ಸನದಿ ಮನವಿ

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಶಾಕೀರ ಸನದಿ ಅವರಿಗೆ ಈ ಬಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪೊನ್ನಣಿ ವಿಧಾನಸಭಾ ಕ್ಷೇತ್ರದ ಎಐಸಿಸಿ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕೇರಳ: ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹಿರಿಯ ಎಐಸಿಸಿ ಮುಖಂಡರು ಆದ ಶಾಕೀರ್‌ ಸನದಿ , ಮುಸಲ್ಮಾನ ಬಾಂಧವರಲ್ಲಿ ಮನವಿ ಮಾಡಿದ್ದಾರೆ.

ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಉಸ್ತುವಾರಿಯಾಗಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡಿರುವ ಶಾಕೀರ ಸನದಿ, ಭಾನುವಾರದಂದು ವಿಡಿಯೋ ಮೂಲಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡದೇ ಇರುವದರಿಂದ ಎದ್ದಿದ್ದ ಗೊಂದಲಗಳ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು,ಕಾಂಗ್ರೆಸ್ ಪಕ್ಷವು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮಾತ್ರ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಳವಣಿಗೆ ಸಾಧ್ಯ ಎಂದಿರುವ ಅವರು, ಕಾಂಗ್ರೆಸ್ ಪಕ್ಷವು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಿ ಗೌರವಿಸಿದೆ ಎಂದು ಹಿರಿಯ ಎಐಸಿಸಿ ಮುಖಂಡ ಶಾಕೀರ್‌ ಸನದಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಶಾಕೀರ ಸನದಿ ಅವರಿಗೆ ಈ ಬಾರಿಯ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಪೊನ್ನಣಿ ವಿಧಾನಸಭಾ ಕ್ಷೇತ್ರದ ಎಐಸಿಸಿ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಕಳೆದ 10 ದಿನಗಳಿಂದ ಕೇರಳದಲ್ಲಿ ಬೀಡು ಬಿಟ್ಟಿರುವ ಎಐಸಿಸಿ ಮುಖಂಡ ಶಾಕೀರ್‌ ಸನದಿ. ಪಕ್ಷದ ಅಭ್ಯರ್ಥಿ ಕೆ.ಪಿ.ನೌಶಾದ್ಅಲಿ ಪರವಾಗಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಕ್ಷೇತ್ರದಲ್ಲಿ ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದಿನ ಸಂಕಷ್ಟದ ಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ಅನಿರ್ವಾಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್, ಕೇರಳ ಸಿ.ಎಲ್.ಪಿ ನಾಯಕ ವಿ.ಡಿ. ಸತೀಶನ್ ಅವರು ಸಹ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button