ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ|ಸೇವಾ ಸಂಕಲ್ಪ ಅಭಿಯಾನಕ್ಕೆ ಚಾಲನೆ|ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮೋದಿ ಕೈಜೋಡಿಸಲು ಬಿ.ವೈ.ರಾಘವೇಂದ್ರ ಕರೆ
ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ನಾಗರಿಕರು ತಮ್ಮ ಮನೆಗಳಲ್ಲಿ ಇಂದು ಸಂಜೆ ಮೋದಿ ಹುಟ್ಟುಹಬ್ಬಕ್ಕಾಗಿ, ಆಶೀರ್ವಾದದ ದೀಪ ಬೆಳಗಿಸುವ ಮೂಲಕ ಹಾರೈಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ಸೇವಾ ಸಂಕಲ್ಪ ಅಭಿಯಾನದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಗುರುವಾರದಂದು ಚಾಲನೆ ನೀಡಿದರು.

ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಇಂದಿನಿಂದ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳನ್ನು ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ಆಯುರಾರೋಗ್ಯ ಆಯಸ್ಸು ನೀಡಲಿ, ಭಾರತವನ್ನು ಪ್ರಪಂಚದಲ್ಲಿಯೇ ಇನ್ನಷ್ಟು ಬಲಶಾಲಿಯನ್ನಾಗಿ ಮುನ್ನಡೆಸಲು ಅವರಿಗೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥಿಸಲಾಯಿತು ಎಂದರು.
ದೇವಸ್ಥಾನದ ಆವರಣದಲ್ಲಿ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನದ ನಡೆಯಲಿದ್ದು, ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ನಾಗರಿಕರು ತಮ್ಮ ಮನೆಗಳಲ್ಲಿ ಇಂದು ಸಂಜೆ ಮೋದಿ ಹುಟ್ಟುಹಬ್ಬಕ್ಕಾಗಿ, ಆಶೀರ್ವಾದದ ದೀಪ ಬೆಳಗಿಸುವ ಮೂಲಕ ಹಾರೈಸುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.

‘ಸೇವಾ ಸಂಕಲ್ಪ’ ಅಭಿಯಾನದ ಆಶಯದಂತೆ, ಜನಸೇವೆಯೇ ಜನಾರ್ದನ ಸೇವೆ ಎಂಬ ಭಾವನೆಯೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ನಮ್ಮ ಸೇವಾ ಕಾರ್ಯಗಳು ನಿರಂತರವಾಗಿ ಸಾಗಲಿ ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದೇ ವೇಳೆ ಸಂಕಲ್ಪ ಮಾಡಿದರು.



ಶಾಸಕರಾದ ಎಸ್ ಎನ್ ಚನ್ನಬಸಪ್ಪ, ಡಾ.ಧನಂಜಯ ಸರ್ಜಿ, ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ, ನಗರ ಅಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಜ್ಞಾನೇಶ್ವರ್, ನಗರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಕೆ ನವಲೆ ದೀನದಯಾಳು, ನಗರ ಪ್ರಭಾರಿ ಕುಪೇಂದ್ರ ವಿವಿಧ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಸೌಮ್ಯ ಹೆಚ್.ಪಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







