Shivamogga

11 ವರುಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ|ಆರೋಪಿಗೆ ಐದು ವರುಷ ಜೈಲು ಶಿಕ್ಷೆ|ಭದ್ರಾವತಿ ತಾಲೂಕಿನಲ್ಲಿ ನಡೆದಿದ್ದ ಘಟನೆ

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರ ಬಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿತ್ತು.

ಶಿವಮೊಗ್ಗ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ದುರುಳನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು 15,000/- ರೂ ದಂಡವನ್ನು ವಿಧಿಸಿ, ಸಂತ್ರಸ್ತ ಬಾಲಕಿಗೆ 50,000/- ರೂ ಪರಿಹಾರ ನೀಡಲು ಶಿವಮೊಗ್ಗ ಜಿಲ್ಲಾ ಘನ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ (FTSC-1) ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಕಳೆದ 2024ರಲ್ಲಿ ಭದ್ರಾವತಿ ತಾಲ್ಲೂಕಿನ 49 ವರ್ಷದ ವ್ಯಕ್ತಿಯೊರ್ವ 11 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರ ಬಗ್ಗೆ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿತ್ತು.

ಆಗಿನ ತನಿಖಾಧಿಕಾರಿ ಶ್ರೀಮತಿ ಕವಿತಾ ಅವರು ತನಿಖೆ ಪೂರೈಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು.

ಸರ್ಕಾರದ ಪರವಾಗಿ ಅಭಿಯೋಜಕ ಶ್ರೀಧರ್ ಸರ್ಕಾರಿ ವಾದ ಮಂಡಿಸಿದ್ದರು.

Follow Us

Leave a Reply

Your email address will not be published. Required fields are marked *

Back to top button