
ಏಕ್ತಾನಗರ (ಗುಜರಾತ್): ಭಾರತೀಯ ಚಿತ್ರರಂಗದ ಪರಮೋಚ್ಛ ಪುರಸ್ಕಾರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಅನಂತ್ನಾಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಧಾನ ಮಾಡಿದರು.
ಸೋಮವಾರದಂದು ನಡೆದ 2024 ರಾಷ್ಟ್ರೀಯ ಚಲನಚಿತ್ರ ಪುರಸ್ಕಾರ ಪ್ರಧಾನ ಕಾರ್ಯಕ್ರಮದಲ್ಲಿ ನಟ ಅನಂತ್ನಾಗ್ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಫಲಕ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಚಲನಚಿತ್ರರಂಗದ ಅನೇಕ ಗಣ್ಯರು ಉಪಸ್ಥಿತರಿದ್ದರು.
ಗಣ್ಯರಿಂದ ಅಭಿನಂದನೆ: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರರಂಗದ ಪ್ರಮುಖರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ಅನಂತ್ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಸೌಮ್ಯ ಹೆಚ್.ಪಿ
ನ್ಯೂಇಂಡಿಯಾ ಕನ್ನಡ







