Shivamogga

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ|ಮೆಗ್ಗಾನ್‌, ಸಿಮ್ಸ್‌ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ|ನ್ಯಾಯಾಧೀಶ ಮಂಜುನಾಥ್‌ ಅವರಿಂದ ಚಾಲನೆ

ಮಾನಸಿಕ ಆರೋಗ್ಯ ಕಾಪಾಡುವ ಕುರಿತಾದ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಶಿವಮೊಗ್ಗ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರದಂದು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮಾನಸಿಕ ಆರೋಗ್ಯ ಕಾಪಾಡುವ ಕುರಿತಾದ ಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಿಂದ ಹೊರಟ ಜಾಥಾಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್ ಜಿ. ಎ. ಅವರು ಚಾಲನೆ ನೀಡಿದರು.

ಜಾಗೃತಿ ಜಾಥಾವು ಸರ್ಕ್ಯೂಟ್ ಹೌಸ್, ಕುವೆಂಪು ರಸ್ತೆ ಹಾಗೂ ಜ್ಯೂಯಲ್ ರಾಕ್ ಹೋಟೆಲ್ ಮಾರ್ಗವಾಗಿ ಐ.ಎಂ.ಎ. ಹಾಲ್‌ನಲ್ಲಿ ಮುಕ್ತಾಯಗೊಂಡಿತು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ. ಎಸ್, ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಸರ್ಜನ್ ಡಾ.ನಾಗೇಶ್ ಕೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ರಾಮಪ್ರಸಾದ್, ಶುಶ್ರೂಷಕ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button