KarnatakaNew Delhi

ವೋಟ್ ಬಚಾವೋ, ದೇಶ ಬಚಾವೋ” ಅಭಿಯಾನ|ಎಐಸಿಸಿ ವೀಕ್ಷಕರಾಗಿ ರಾಹುಲ್‌ ಗಾಂಧಿ ಆಪ್ತ ಶಾಕೀರ್‌ ಸನದಿ ನೇಮಕ|ಹೆಚ್.ಕೆ.ಪಾಟೀಲ್‌,ಸೌಮ್ಯ ರೆಡ್ಡಿಗೂ ಸ್ಥಾನ

ಪ್ರಭಾವಿ ಮುಖಂಡ ಶಾಕೀರ್‌ ಸನದಿ ಅವರ ಪ್ರಜಾಪ್ರಭುತ್ವದ ರಕ್ಷಣೆ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕಿನ ಸಂರಕ್ಷಣೆಗೆ ನಡೆಸಿರುವ ಹೋರಾಟವನ್ನು ಗುರುತಿಸಿರುವ ಎಐಸಿಸಿ, ಅವರಿಗೆ ಮಹತ್ತರ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ವೋಟ್ ಬಚಾವೋ, ದೇಶ ಬಚಾವೋ” ಅಭಿಯಾನದ ಅಂಗವಾಗಿ ಎಐಸಿಸಿ, ರಾಷ್ಟ್ರದ್ಯಾಂತ ಪ್ರಮುಖ ಕಾಂಗ್ರೆಸ್‌ ಮುಖಂಡರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದೆ.

ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಅಕ್ಟೋಬರ್‌ 16ರಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಕರ್ನಾಟಕದ ಪ್ರಭಾವಿ ಮುಖಂಡ, ರಾಹುಲ್‌ ಗಾಂಧಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಶಾಕೀರ್‌ ಸನದಿ ಅವರನ್ನು ನೇಮಕ ಮಾಡಲಾಗಿದೆ.

ಶಾಕೀರ್‌ ಸನದಿ ಅವರಿಗೆ ಮಹಾರಾಷ್ಟ್ರ ರಾಜ್ಯದ ಮೂರು ಜಿಲ್ಲೆಗಳಾದ ಯಾವತ್ಮಲ್,ಅಮರಾವತಿ ನಗರ ಮತ್ತು ಗ್ರಾಮೀಣ ಭಾಗದ ಉಸ್ತುವಾರಿ ನೀಡಲಾಗಿದೆ.

ನೇಮಕದ ಬಳಿಕ ತಮ್ಮ ಅನಸಿಕೆ ಹಂಚಿಕೊಂಡಿರುವ ಕಾಂಗ್ರೆಸ್‌ ಮುಖಂಡ ಶಾಕೀರ್‌ ಸನದಿ, ಪ್ರಜಾಪ್ರಭುತ್ವದ ರಕ್ಷಣೆ, ಮತದಾನದ ಹಕ್ಕಿನ ಸಂರಕ್ಷಣೆ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಈ ಮಹತ್ವದ ಜವಾಬ್ದಾರಿಯನ್ನು ನಿಷ್ಠೆ, ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.

ಜನರ ಧ್ವನಿಗೆ ಶಕ್ತಿ ತುಂಬಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಲು ಸದಾ ಬದ್ಧನಾಗಿದ್ದೇನೆ ಎಂದು ಕಾಂಗ್ರೆಸ್‌ ಮುಖಂಡ ಶಾಕೀರ್‌ ಸನದಿ ತಿಳಿಸಿದ್ದಾರೆ.

ಕೇರಳದ ಪೊನ್ನಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಎಐಸಿಸಿ ಮುಖಂಡ ಶಾಕೀರ್‌ ಸನದಿ
ಕೇರಳದ ಪೊನ್ನಣಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಪರ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ಎಐಸಿಸಿ ಮುಖಂಡ ಶಾಕೀರ್‌ ಸನದಿ

ರಾಹುಲ್‌ ಗಾಂಧಿ ಆಪ್ತ ಶಾಕೀರ್‌ ಸನದಿ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನೇಮಕ ಮಾಡಿರುವುದನ್ನು ಕರ್ನಾಟಕದ ಹಲವು ಕಾಂಗ್ರೆಸ್‌ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.

ಶಾಕೀರ್‌ ಸನದಿ ಅವರಿಗೆ ನೀಡಲಾಗಿರುವ ಜವಾಬ್ದಾರಿಯಿಂದ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ ಎಂದು ಹಾರೈಸಿದ್ದಾರೆ.

ಶಾಕೀರ್‌ ಸನದಿ ಅವರೊಂದಿಗೆ ಮಾಜಿ ಸಚಿವ ಎಚ್.ಕೆ.ಪಾಟೀಲ್‌, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಸೇರಿದಂತೆ ರಾಜ್ಯದ 12 ನಾಯಕರಿಗೆ ನೆರೆಯ ರಾಜ್ಯಗಳ ವೀಕ್ಷಕರ ಜವಾಬ್ದಾರಿ ನೀಡಲಾಗಿದೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button