Shivamoggaಶಿವಮೊಗ್ಗ ದಸರಾ-2026

ಯೋಗ ದಸರಾದಲ್ಲಿ 2 ಸಾವಿರ ಯೋಗಪಟುಗಳು ಭಾಗಿ|ಆರೋಗ್ಯ ಸದೃಢತಗೆ ಯೋಗಾಭ್ಯಾಸ ಅವಶ್ಯ-ಶಾಸಕ ಎಸ್.ಎನ್.ಚನ್ನಬಸಪ್ಪ

ಭಾರತವು ಜಗತ್ತಿಗೆ ಪರಿಚಯಿಸಿದ ಅಮೂಲ್ಯ ಕೊಡುಗೆಗಳಲ್ಲಿ ಯೋಗವೂ ಪ್ರಮುಖವಾದುದು ಶಾಸಕ ಎಸ್.ಎನ್.ಚನ್ನಬಸಪ್ಪ ಎಂದು ಹೇಳಿದರು.

ಶಿವಮೊಗ್ಗ: ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ರೋಗಗಳನ್ನು ದೂರವಿಟ್ಟು ಉತ್ತಮ ಆರೋಗ್ಯ ಹಾಗೂ ಸುಂದರ ಜೀವನಶೈಲಿಯನ್ನು ರೂಪಿಸಿಕೊಳ್ಳಲು ತಪ್ಪದೇ ಯೋಗಾಭ್ಯಾಸ ಮಾಡಬೇಕು ಎಂದು ಕರೆ ನೀಡಿದರು.

ಯೋಗ ದಸರಾ ಹಿನ್ನೆಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು, ಭಾರತವು ಜಗತ್ತಿಗೆ ಪರಿಚಯಿಸಿದ ಅಮೂಲ್ಯ ಕೊಡುಗೆಗಳಲ್ಲಿ ಯೋಗವೂ ಪ್ರಮುಖವಾದುದು ಶಾಸಕ ಎಸ್.ಎನ್.ಚನ್ನಬಸಪ್ಪ ಎಂದು ಹೇಳಿದರು.

ಯೋಗವು ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡುವುದರ ಜೊತೆಗೆ ಉತ್ತಮ ಆರೋಗ್ಯ ಮತ್ತು ಶಿಸ್ತಿನ ಜೀವನಶೈಲಿಯನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಯೋಗದ ಮಹತ್ವ, ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನಗಳು ಹಾಗೂ ಪ್ರಾಣಾಯಾಮದ ಮಹತ್ವ ಕುರಿತು ಯೋಗಾಚಾರ್ಯ ಸಿ.ವಿ. ರುದ್ರಾರಾಧ್ಯರು ತಿಳಿಸಿದರು.

ಧ್ಯಾನದ ಅಗತ್ಯದ ಕುರಿತು ಹಾಗೂ ನಿಯಮಿತ ಯೋಗಾಭ್ಯಾಸವು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಕಾಪಾಡಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇಂದಿನ ದಿನಗಳಲ್ಲಿ ಯೋಗಾಭ್ಯಾಸ ಅನಿವಾರ್ಯವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್ ಹೇಳಿದರು.

ಬಾ.ಸು. ಅರವಿಂದ್, ಯೋಗಾಚಾರ್ಯ ಅನಿಲ್ ಕುಮಾರ್ ಹೆಚ್. ಶೆಟ್ಟರ್, ಗೋಪಾಲಕೃಷ್ಣ ಸೇರಿದಂತೆ ಇತರರು ಯೋಗದ ಮಹತ್ವ ಹಾಗೂ ಸಾಮೂಹಿಕ ಯೋಗಾಭ್ಯಾಸದ ಅಗತ್ಯದ ಕುರಿತು ವಿಚಾರಗಳನ್ನು ಹಂಚಿಕೊಂಡರು.

2000ಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿ ಯೋಗಾಸನ, ಪ್ರಾಣಾಯಾಮ ಹಾಗೂ ಧ್ಯಾನವನ್ನು ಅಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಯೋಗದ ಮಹತ್ವ, ಆರೋಗ್ಯಕರ ಜೀವನಶೈಲಿಯಲ್ಲಿ ಯೋಗದ ಪಾತ್ರ ಮತ್ತು ನಿತ್ಯ ಯೋಗಾಭ್ಯಾಸದ ಅಗತ್ಯದ ಕುರಿತು ಅರಿವು ಮೂಡಿಸಲಾಯಿತು.

ಪಾಲಿಕೆ ಆಯುಕ್ತ ಮಾಯಣ್ಣಗೌಡ ಅವರು ಸ್ವಾಗತಿಸಿದರು. ಪಾಲಿಕೆಯ ಅಧಿಕಾರಿ ಸುಧಾಕರ ಬಿಜ್ಜೂರ್ ವಂದನಾರ್ಪಣೆ ಮಾಡಿದರು.

ಪಾಲಿಕೆ ಮಾಜಿ ಸದಸ್ಯೆ ರೇಖಾ ರಂಗನಾಥ್, ರೋಟರಿ ಮಾಜಿ ಗವರ್ನರ್ ಜಿ. ವಿಜಯಕುಮಾರ್, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button