ಆರ್‌ಟಿಐ ಕಾಯ್ದೆ, ಅಧಿಕಾರಿಗಳು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು|ಮಾಹಿತಿ ನೀಡಲು ವಿಳಂಬ,ನಿರ್ಲಕ್ಷ ಮಾಡಿದ್ದಲ್ಲಿ ಶಿಸ್ತುಕ್ರಮ-ರಾಜ್ಯ ಮಾಹಿತಿ ಆಯುಕ್ತ ಡಾ.ಮಹೇಶ ವಾಳ್ವೇಕರ್
ಆರ್‌ಟಿಐ ಕಾಯ್ದೆಯಡಿ ಮಾಹಿತಿ ಕೋರಿದ ಅರ್ಜಿದಾರರಿಗೆ ವಿಳಂಬ ಮಾಡದೆ ನಿಗದಿತ ಸಮಯದೊಳಗೆ ಮಾಹಿತಿ ನೀಡಬೇಕು ಮತ್ತು ಸೂಕ್ತ ಹಿಂಬರಹ ನೀಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.ಮಹೇಶ ವಾಳ್ವೇಕರ್ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ 2005 ಅನ್ನು ಅಧಿಕಾರಿಗಳು ಸ್ಪಷ್ಟವಾಗಿ ತಿಳಿದುಕೊಂಡಲ್ಲಿ ಮಾತ್ರ, ಸಾರ್ವಜನಿಕರಿಂದ ಮಾಹಿತಿಗಾಗಿ ಸಲ್ಲಿಕೆಯಾಗುವ ಅರ್ಜಿಗಳಿಗೆ ಸಮರ್ಪಕವಾಗಿ ಉತ್ತರ ನೀಡಬಹುದು ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.ಮಹೇಶ ವಾಳ್ವೇಕರ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಲೋಕೋಪಯೋಗಿ ಇಲಾಖೆ, ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ಕರ್ನಾಟಕ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾ ಭವನದಲ್ಲಿ ಗುರುವಾರ ಇಲಾಖೆಯ ದಕ್ಷಿಣ ವಲಯದ ಅಭಿಯಂತರರು ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಿದ್ದ ತಾಂತ್ರಿಕ ತರಭೇತಿ ಶಿಬಿರ ಹಾಗೂ ಮಾಹಿತಿ ಹಕ್ಕು ಅಧಿನಿಯಮ – 2005 ರ ಕುರಿತ ಜಾಗೃತಿ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಮಾಹಿತಿ ಹಕ್ಕು ಕಾಯ್ದೆ 2005 ರ ಮೂಲಕ ಸರಕಾರದ ವಿವಿಧ ಯೋಜನೆಗಳ, ಕಾಮಗಾರಿಗಳ ಹಾಗೂ ಸಾರ್ವಜನಿಕ ಹಿತಾಸಕ್ತಿವುಳ್ಳ ಸರಕಾರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಯನ್ನು ಕೇಳಿ ಪಡೆಯುವುದು ಪ್ರತಿಯೊಬ್ಬ ಭಾರತೀಯ ನಾಗರಿಕರ ಮೂಲಭೂತ ಹಕ್ಕಾಗಿದೆ ಎಂದು ರಾಜ್ಯ ಮಾಹಿತಿ ಆಯುಕ್ತ ಡಾ.ಮಹೇಶ ವಾಳ್ವೇಕರ್ ಹೇಳಿದರು.

ಆರ್‌ಟಿಐ ಕಾಯ್ದೆಯಡಿ ಮಾಹಿತಿ ಕೋರಿದ ಅರ್ಜಿದಾರರಿಗೆ ವಿಳಂಬ ಮಾಡದೆ ನಿಗದಿತ ಸಮಯದೊಳಗೆ ಮಾಹಿತಿ ನೀಡಬೇಕು ಮತ್ತು ಸೂಕ್ತ ಹಿಂಬರಹ ನೀಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.ಮಹೇಶ ವಾಳ್ವೇಕರ್ ಅಧಿಕಾರಿಗಳಿಗೆ ಸೂಚಿಸಿದರು.
ಮಾಹಿತಿ ಕೋರಿ ಸಲ್ಲಿಕೆಯಾಗುವ ಅರ್ಜಿದಾರರಿಗೆ 30 ದಿನಗಳೊಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಸ್ವೀಕರಿಸಿದ ಅರ್ಜಿಯು ಇಲಾಖೆಯ ವ್ಯಾಪ್ತಿಗೆ ಒಳಪಡದಿದ್ದರೆ ಸಂಬಂಧಪಟ್ಟವರಿಗೆ 5 ದಿನದೊಳಗೆ ಸೆಕ್ಷನ್6(3) ಅಡಿಯಲ್ಲಿ ವರ್ಗಾಯಿಸಬೇಕು ಎಂದು ತಿಳಿ ಹೇಳಿದರು.

ಈ ಎಲ್ಲ ಪ್ರಕ್ರಿಯೆಗಳನ್ನು ವಿಳಂಬ, ನಿರ್ಲಕ್ಷ್ಯ ಮಾಡಿದ ಪಕ್ಷದಲ್ಲಿ ದಂಡನೆ, ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜನರ ಕೆಲಸಗಳು ಮುಕ್ತ ಹಾಗೂ ತ್ವರಿತವಾಗಿ ಆಗಲೆಂದು ಸಕಾಲ, ಮಾಹಿತಿ ಹಕ್ಕು ಕಾಯ್ದೆ, ಲೋಕಾಯುಕ್ತದಂತಹ ವ್ಯವಸ್ಥೆಗಳು ಸಕ್ರಿಯವಾಗಿದ್ದು, ಜನರ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ತುರ್ತಾಗಿ ಕಾರ್ಯನಿರ್ವಹಿಸಬೇಕು ಎಂದರು.
ಕಾನೂನಿನ ವ್ಯಾಪ್ತಿಯಲ್ಲಿ ಬಗೆಹರಿಸಬಹುದಾದ ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ಆದ್ಯತೆ ನೀಡಬೇಕು. ಕಡತಗಳ ನಿರ್ವಹಣೆಯನ್ನು ವಿಷಯ ನಿರ್ವಾಹಕರು ಸಮರ್ಪಕವಾಗಿ ಮಾಡಬೇಕು ಎಂದು ಕರೆ ನೀಡಿದರು.
ವಿಳಂಬ ಧೋರಣೆ ಅನುಸರಿಸಬಾರದು ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ.ಮಹೇಶ ವಾಳ್ವೇಕರ್ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಾಗಾರದಲ್ಲಿ ಲೋಕೋಪಯೋಗಿ ಇಲಾಖೆಯ ಬೆಂಗಳೂರು ದಕ್ಷಿಣ ವಲಯದ ಮುಖ್ಯ ಅಭಿಯಂತರ ಕೆ.ಸಿ. ಸತೀಶ್, ಅಧೀಕ್ಷಕರ ಅಭಿಯಂತರ ಜಿ.ಸಿ. ಜಗದೀಶ್ ಸೇರಿದಂತೆ ದಕ್ಷಿಣ ವಲಯದ ಎಲ್ಲಾ ಜಿಲ್ಲೆಗಳ ಅಭಿಯಂತರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು, ಸಂವಾದದಲ್ಲಿ ಪಾಲ್ಗೊಂಡು ಅವಶ್ಯಕ ಮಾಹಿತಿಗಳನ್ನು ಪಡೆದರು.
ವರದಿ: ವಿಜಯೀಂದ್ರ ಪಿ.ಹುನಗುಂದ್
ಪ್ರಧಾನ ಸಂಪಾದಕ
ನ್ಯೂ ಇಂಡಿಯಾ ಕನ್ನಡ
ಬೆಂಗಳೂರು







