CrimeDistrictShivamogga

ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ- ಸುಮೋಟೋ ಕೇಸ್ ದಾಖಲು-ಶಿವಮೊಗ್ಗ ಎಸ್ಪಿ ಮಿಥುನ್‌ಕುಮಾರ್‌

ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು , ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ ಎಂದಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿಡಿಯೋದಲ್ಲಿರುವ ಕಿಡಿಗೇಡಿಗಳು ಯಾರು , ಎಲ್ಲಿ ಪೋಸ್ಟ್ ಆಗಿದ್ದು, ಎಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಲಿದೆ ಎಂದು ಹೇಳಿದರು.

ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆದ ಬಳಿಕ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಶಿವಮೊಗ್ಗದ ಎಸ್ ಪಿ ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯಲ್ಲಿ ಕೆಲವರು ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿರುವ 12 ನಿಮಿಷಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಮಂಗಳವಾರದಂದು ಬೆಳಗ್ಗೆ 9 ಗಂಟೆನಂತರ ಈ ವೀಡಿಯೋ ಕುರಿತಂತೆ ಮಾಹಿತಿ ತಿಳಿದು ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ ಎಂದು ಅವರು ತಿಳಿಸಿದರು.

ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದು , ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ ಎಂದಿರುವ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿಡಿಯೋದಲ್ಲಿರುವ ಕಿಡಿಗೇಡಿಗಳು ಯಾರು , ಎಲ್ಲಿ ಪೋಸ್ಟ್ ಆಗಿದ್ದು, ಎಲ್ಲದರ ಬಗ್ಗೆ ಸಂಪೂರ್ಣ ತನಿಖೆಯಾಗಲಿದೆ ಎಂದು ಹೇಳಿದರು.

ವೈರಲ್ ಆಗಿರುವ ವೀಡಿಯೋ ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಸ್ ಪಿ ಮಿಥುನ್ ಕುಮಾರ್ ಪ್ರತಿಕ್ರಿಯೆ‌ ನೀಡಿದ್ದಾರೆ.

ಇದಕ್ಕೂ ಮೊದಲು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಮತ್ತು ಬಿಜೆಪಿ ಶಾಸಕ ಚೆನ್ನಬಸಪ್ಪ ಭದ್ರಾವತಿ ಪಾಕ್ ಪರ ಘೋಷಣೆ ಕೂಗಿದವರ ವಿರುದ್ದ ಕೂಡಲೆ ಕ್ರಮ ಕೈಗೊಳ್ಳುವಂತೆ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.

“ತಾವು ಏನೇ ಮಾಡಿದರೂ, ನಮ್ಮ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ ಎಂಬ ದೇಶದ್ರೋಹಿ ಭಾವನೆ ಅವರಲ್ಲಿದೆ”.

ಹೀಗಾಗಿ ಯಾವುದೇ ಕಾನೂನು ಪೊಲೀಸರ ಭಯವಿಲ್ಲದೇ ಈ ರೀತಿ ಪಾಕಿಸ್ತಾನ ಪರ ಘೋಷಣೆ ಕೂಗುತ್ತಿದ್ದಾರೆ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಒಂದು ಕೋಮಿನ ಪರಓಲೈಕೆ ರಾಜಕಾರಣದ ಮಾಡುತ್ತಿದೆ ಎಂದು ಅವರು ಕಿಡಿಕಾರಿದರು.

ದೇಶದ್ರೋಹಿ ಕೆಲಸ ಮಾಡಿರುವ ಯಾರೇ ಇರಲಿ ಅಂತಹವರ ಮೇಲೆ ನಿಧ್ಯಾ೯ಕ್ಷಿಣವಾಗಿ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಶಾಸಕ ಚೆನ್ನಬಸಪ್ಪ ಆಗ್ರಹಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗಬಾರದು ಎಂದು ಹೇಳಿದರು.

Leave a Reply

Your email address will not be published. Required fields are marked *

Back to top button