ರಾಜ್ಯ ಸರ್ಕಾರದ ಕೆಪಿಎಸ್ ಮ್ಯಾಗ್ನೆಟ್ ಯೋಜನೆ| 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳಿಗೆ ಬೀಳಲಿದೆ ಬೀಗ|ಶಿವಮೊಗ್ಗ ಜಿಲ್ಲೆಯಲ್ಲಿ 1518 ಶಾಲೆಗಳನ್ನು ಮುಚ್ಚುವ ಪಟ್ಟಿ ಬಹಿರಂಗ
ಈಗಾಗಲೇ ಚನ್ನಪಟ್ಟಣದಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಶುರುವಾಗಿದ್ದು, ಇದೀಗ ಈ ಕೆಪಿಎಸ್ ಕದಂಬ ಬಾಹುವಿನಲ್ಲಿ ಶಿವಮೊಗ್ಗದ ಸರ್ಕಾರಿ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚುವ ಪಟ್ಟಿಯಲ್ಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ ವಿನಯ ಚಂದ್ರ ನೀಡಿದರು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂಬ ಆತಂಕಕಾರಿ ಅಂಶ ಹೊರಬಿದ್ದಿದೆ.
ಶಿವಮೊಗ್ಗ ಜಿಲ್ಲೆಯೊಂದರಲ್ಲೇ 1518 ಶಾಲೆಗಳನ್ನು ಮುಚ್ಚಲು ಪಟ್ಟಿ ಮಾಡಲಾಗಿದೆ ಎಂದು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ ವಿನಯಚಂದ್ರ ದಾಖಲೆ ಸಮೇತ ಬಹಿರಂಗಪಡಿಸಿದ್ದಾರೆ.
ಬುಧವಾರದಂದು ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆ ಮುಚ್ವುವ ಆದೇಶ ಈಗಾಗಲೇ ಚೆನ್ನಪಟ್ಟಣದಲ್ಲಿ ಜಾರಿಯಾಗಿದ್ದು, ಹೀಗಾಗಿ ಸರ್ಕಾರಿ ಶಾಲೆ ಉಳಿಸಿ ಎಂದು ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ರಾಜ್ಯಾದ್ಯಂತ ಹೋರಾಟಕ್ಕಿಳಿದಿದಿದೆ ಎಂದು ಹೇಳಿದರು.

ಈಗಾಗಲೇ ಚನ್ನಪಟ್ಟಣದಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಶುರುವಾಗಿದ್ದು, ಇದೀಗ ಈ ಕೆಪಿಎಸ್ ಕದಂಬ ಬಾಹುವಿನಲ್ಲಿ ಶಿವಮೊಗ್ಗದ ಸರ್ಕಾರಿ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚುವ ಪಟ್ಟಿಯಲ್ಲಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಎಐಡಿಎಸ್ಓ ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ ವಿನಯಚಂದ್ರ ನೀಡಿದರು.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚಾ ಗ್ರಾಮದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಿಲೇರಿಮೂಡಲಿಯ ಕಿರಿಯ ಪ್ರಾಥಮಿಕ ಶಾಲೆಯನ್ನು ಬಿಲ್ಲೇಶ್ವರದ ಹಿರಿಯ ಪ್ರಾಥಮಿಕ ಶಾಲೆಯೊಂದಿಗೆ ಮತ್ತು ಸಾಗರ ತಾಲ್ಲೂಕಿನ ತಡಗಳಲೆ ಗ್ರಾಮದಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ, ತಡಗಳಲೆ ಎಕ್ಸ್ ಟೆನ್ಷನ್ ನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸುಳ್ಳೂರಿನಲ್ಲಿರುವ ಹಿರಿಯ ಪ್ರಾಥಮಿಕ ಶಾಲೆಯನ್ನು ಕಣಸೆ ಹಿರಿಯ ಪ್ರಾಥಮಿಕ ಶಾಲೆಯೊಳಗೆ ವಿಲೀನಗೊಳಿಸಲಿದ್ದಾರೆ ಎಂದು ವಿನಯ ಚಂದ್ರ ತಿಳಿಸಿದರು.
ಇದೇ ರೀತಿ ಜಿಲ್ಲೆಯಾದ್ಯಂತ 1518 ಶಾಲೆಗಳನ್ನು ಮುಚ್ಚಲು ಮುಂದಾಗಿದ್ದು, ಈ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಿರುವ ಶಾಲೆಗಳೇ ಆಗಿರೋದು ಗಮನಾರ್ಹ ಸಂಗತಿ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಒಂದೇ ಒಂದು ಶಾಲೆಯನ್ನು ಮುಚ್ಚುವುದಿಲ್ಲ ಸ್ಪಷ್ಟೀಕರಣ ನೀಡುತ್ತಿರುವ ರಾಜ್ಯದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ವಾಸ್ತವ ಸಂಗತಿ ಮರೆಮಾಚುತ್ತಿದ್ದಾರೆ ಎಂದು ವಿನಯಚಂದ್ರ ಗಂಭೀರ ಆರೋಪ ಮಾಡಿದರು.

ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ ಎಂದು ಹೇಳಿದರು.
ಇದಿಷ್ಟೇ ಅಲ್ಲದೆ, ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರುಗಳು, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ, ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಲಾಗುತ್ತಿದೆ.

ಕೇವಲ ಶಾಲೆಗಳಷ್ಟೇ ಅಲ್ಲದೆ ರಾಜ್ಯದ ಸಾವಿರಾರು ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಕೂಡ ಮುಚ್ಚುವ ಅಪಾಯಕ್ಕೆ ಸಿಲುಕಿವೆ ಎಂದು ವಿನಯಚಂದ್ರ ಆತಂಕ ವ್ಯಕ್ತಪಡಿಸಿದರು.
ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಯಶ್ವಂತ್ ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.






