ಶಿವಮೊಗ್ಗ:ಇಬ್ಬರು ಯುವಕರಿಗೆ “ಕರಾಳ ರಾತ್ರಿ”ಯಾದ ಶುಕ್ರವಾರ|ಅಪಘಾತದಲ್ಲಿ ರಸ್ತೆ ಮೇಲೆ ಬಿದ್ದಿದ್ದ ದುರ್ದೈವಿಗಳು|ಅಪರಿಚಿತ ವಾಹನ ಹರಿದು ಸ್ಥಳದಲ್ಲೇ ಸಾವು
ಶುಕ್ರವಾರ ರಾತ್ರಿ ನಡೆದ ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಕಿಫ್ (21) ಮತ್ತು ಚಾಂದಪೀರ್ (18) ಎಂದು ಗುರುತಿಸಲಾಗಿದೆ.

ಶಿವಮೊಗ್ಗ.ಡಿ.06, ಎರಡು ಬೈಕ್ಗಳು ಪರಸ್ಪರ ಮುಖಾಮುಖಿ ಡಿಕ್ಕಿಯಾದ ನಂತರ ರಸ್ತೆ ಮೇಲೆ ಬಿದ್ದಿದ್ದ ಬೈಕ್ ಸವಾರರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ನಡೆದ ಈ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಕಿಫ್ (21) ಮತ್ತು ಚಾಂದಪೀರ್ (18) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಮತ್ತೊಂದು ಬೈಕಿನಲ್ಲಿದ್ದ ಯುವಕ ಗುರುಕಿರಣ್ ಎಂದು ಹೇಳಲಾಗಿದ್ದು, ಅವರು ತಾಲೂಕಿನ ಕ್ಯಾತಿನಕೆರೆ ಗ್ರಾಮದವರಾಗಿದ್ದಾರೆ.
ಮೃತ ಪಟ್ಟ ಇಬ್ಬರು ದುರ್ದೈವಿಗಳು ಶುಕ್ರವಾರ ರಾತ್ರಿ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಹೊರಟಿದ್ದರು ಎಂದು ಮೂಲಗಳು ಹೇಳಿವೆ.
ಗಾಯಗೊಂಡಿರುವ ಯುವಕ ಕಿರಣ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಹೊರಟಿದ್ದನು ಎಂದು ಹೇಳಲಾಗಿದೆ.
ಈ ವೇಳೆ ರಸ್ತೆ ಮೇಲೆ ಬಿದ್ದಿದ್ದ ಅಕೀಫ್ ಹಾಗು ಚಾಂದಪೀರ್ ಅವರ ಮೇಲೆ ಅಪರಿಚಿತ ವಾಹನವೊಂದು ಹರಿದು ಹೋಗಿದೆ.
ಆಯನೂರು ಕೋಟೆ ಬಳಿ ನಡೆದ ಈ ದುರಂತದಲ್ಲಿ ಸಣ್ಣ ಪ್ರಮಾಣದಲ್ಲಿ ಗಾಯಗೊಂಡಿದ್ದ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಅಪಘಾತದ ನಂತರ ಸ್ಥಳಕ್ಕೆ ಆಗಮಿಸಿದ ಕುಂಸಿ ಪೊಲೀಸ್ರು ಸಾರ್ವಜನಿಕರ ಸಹಾಯದಿಂದ ಮೃತಪಟ್ಟ ಇಬ್ಬರು ಯುವಕರು ಸೇರಿದಂತೆ ಗಾಯಗೊಂಡ ಗುರುಕಿರಣ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಧರ್ವ ನಗರದಲ್ಲಿ ಎರಡು ಬೈಕ್ ಡಿಕ್ಕಿ
ಓರ್ವನ ಸ್ಥಿತಿ ಗಂಭೀರ, ಮಹಿಳೆಗೆ ಗಾಯ
ಪೆಟ್ರೋಲ್ ಹಾಕಿಸಿಕೊಳ್ಳಲು ಹೊರಟಿದ್ದ ಬೈಕ್ಗೆ ಇನ್ನೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಲ್ಲಿಕಾರ್ಜುನ ನಗರದ ನಿವಾಸಿ ಡಿ.ಎಲ್. ಈಶ್ವರೇಗೌಡ (55) ಎಂಬುವವರು ತೀವ್ರವಾಗಿ ಗಾಯಗೊಂಡ ಘಟನೆ ನಗರದ ಗಂಧರ್ವ ನಗರದ ಕ್ರಾಸ್ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ.
ಗಂಧರ್ವ ನಗರದ ಕ್ರಾಸ್ ಪಕ್ಕದಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಒಬ್ಬರ ಸ್ಥಿತಿ ಗಂಭೀರವಾಗಿದೆ.
ತೀವ್ರ ಗಾಯಗೊಂಡವರನ್ನು ಮಲ್ಲಿಕಾರ್ಜುನ ನಗರದ ನಿವಾಸಿ ಡಿ.ಎಲ್. ಈಶ್ವರೇಗೌಡ (55) ಎಂದು ಗುರುತಿಸಲಾಗಿದೆ.
ಅಪಘಾತದ ನಂತರ ಸ್ಥಳೀಯರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ ಅಪಘಾತ ನಡೆಸಿ ಪರಾರಿಯಾಗಿದ್ದ ಬೈಕ್ ಸವಾರನನ್ನು ಪೊಲೀಸರು ಪತ್ತೆ ಹಚ್ಚಿದ್ದು, ಪಶ್ಚಿಮ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.






