ನಿತಿನ್ ನಬೀನ್ ನೇಮಕದಿಂದ ಯುವ ಜನರಿಗೆ ಸ್ಫೂರ್ತಿಯ ಸಂದೇಶ|ನೂತನ ಕಾರ್ಯಾಧ್ಯಕ್ಷರ ಜೊತೆ ಬಿ.ವೈ.ವಿಜಯೇಂದ್ರ ಭೇಟಿ-ಮಾತುಕತೆ
ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತಿರುವ ನಿತೀನ್ ನಬೀನ್ ಅವರು, ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷ ನಿತಿನ್ ನಬೀನ್ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಬುಧವಾರದಂದು ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಬೀನ್ ಅವರನ್ನು ಭೇಟಿಯಾದ ಅವರು ಕರ್ನಾಟಕದಲ್ಲಿ ಬಿಜೆಪಿ ಸಂಘಟನೆಯ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಬಳಿಕ, ಯುವ ಸಮೂಹ ಸಂಘಟನೆಯ ಬಹುದೊಡ್ಡ ಶಕ್ತಿಯಾಗಿದೆ. ಈ ನಿಟ್ಟಿನಲ್ಲಿ ಯುವ ಉತ್ಸಾಹಿಗಳನ್ನು ಗುರುತಿಸುವುದು ಭಾರತೀಯ ಜನತಾ ಪಾರ್ಟಿಯ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ಇತರ ವರಿಷ್ಠರು ಯುವ ನಾಯಕ ನಿತಿನ್ ನಬಿನ್ ಅವರನ್ನು ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ದೇಶದ ಯುವ ಜನರಿಗೆ ಸ್ಫೂರ್ತಿಯ ಸಂದೇಶ ರವಾನಿಸಿದ್ದಾರೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪಕ್ಷದ ಇತಿಹಾಸದಲ್ಲಿ ಅತ್ಯುನ್ನತ ಜವಾಬ್ದಾರಿ ವಹಿಸಿಕೊಂಡ ಯುವ ನಾಯಕ ಎಂಬ ಹೆಗ್ಗಳಿಕೆಗೆ ನಿತಿನ್ ನಬಿನ್ ಜೀ ಪಾತ್ರರಾಗಿದ್ದಾರೆ.
ಅವರು ನಡೆದು ಬಂದ ಹಾದಿಯಲ್ಲಿ ಪಕ್ಷ ನಿಷ್ಠೆ, ಕ್ರಿಯಾಶೀಲತೆ, ರಾಷ್ಟ್ರಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಸಮರ್ಥವಾಗಿ ನಿರೂಪಿಸಿದ್ದಾರೆ.

ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಬಿಹಾರದಲ್ಲಿ ಅಪಾರ ಜನಮನ್ನಣೆ ಗಳಿಸಿದ ಜನನಾಯಕನಾಗಿ ಹೊರಹೊಮ್ಮಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತಿರುವ ನಿತೀನ್ ನಬೀನ್ ಅವರು, ನಮ್ಮಂತವರಿಗೆ ಪ್ರೇರಣೆಯ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.
ಅವರಿಂದ ಬಿಜೆಪಿ ಸಂಘಟನೆ ಇನ್ನಷ್ಟು ಬಲವೃದ್ಧಿಯಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







