KarnatakaNationalPolitical

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆ|ಬಿಜೆಪಿ ತೆಕ್ಕೆಗೆ ಪಡೆಯಲು ತಾಲೀಮು ಶುರು|ಉಸ್ತುವಾರಿಯಾಗಿ ರಾಮ್‌ ಮಾಧವ್| ಕೇರಳಕ್ಕೆ ಶೋಭಾ ಕರಂದ್ಲಾಜೆ ಸಹ ಉಸ್ತುವಾರಿಯಾಗಿ ನೇಮಕ

ಹಲವು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಯಾಗಿ ಪಕ್ಷ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕು.ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೇ ನಿತಿನ್‌ ನಬೀನ್‌, ಪಕ್ಷದ ಅನೇಕ ನಾಯಕರಿಗೆ ಹೊಸ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್‌ ತಾವಡೆ ಅವರನ್ನು ಚಂಡೀಗಢ ಮೇಯರ್ ಚುನಾವಣೆಗೆ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿರುವ ಬಿಜೆಪಿ ನಾಯಕ ರಾಮ್‌ ಮಾಧವ್

ಅದೇ ರೀತಿ ಗ್ರೇಟರ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಈಗಿನಿಂದಲೇ ತಾಲೀಮು ನಡೆಸಲು ನಿರ್ಧರಿಸಿರುವ ನಿತಿನ ನಬೀನ್‌ ಅವರು ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ತಂತ್ರಗಾರಿಕೆಯಲ್ಲಿ ಸಾಕಷ್ಟು ನಿಪುಣರಾಗಿರುವ ರಾಮ್‌ ಮಾಧವ್‌ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದಾರೆ.

ಸಹ ಉಸ್ತುವಾರಿಯನ್ನಾಗಿ ರಾಜಸ್ಥಾನ ಘಟಕದ ಮಾಜಿ ಅಧ್ಯಕ್ಷ ಸತೀಶ್‌ ಪೂನಿಯಾ ಹಾಗೂ ಮಹಾರಾಷ್ಟ್ರದ ಹಾಲಿ ಶಾಸಕ ಸಂಜಯ್‌ ಉಪಾಧ್ಯಾಯ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಇನ್ನು ತಿರುವನಂತಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಮುಂಬರುವ ಕೇರಳ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.

ಈಗಿನಿಂದಲೇ ತಯಾರಿ ನಡೆಸುವ ಉದ್ದೇಶದಿಂದ ಪ್ರಧಾನ ಕಾರ್ಯದರ್ಶಿ ವಿನೋದ ತಾವಡೆ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಹಾಗೂ ಕರ್ನಾಟಕದ ಸಂಸದೆ ಹಾಗೂ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದಾರೆ.

ಹಲವು ರಾಜ್ಯಗಳಲ್ಲಿ ಚುನಾವಣಾ ಉಸ್ತುವಾರಿಯಾಗಿ ಪಕ್ಷ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕು.ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗಿದೆ.

ಕಾಂಗ್ರೆಸ್‌ ಅಧಿಕಾರದಲ್ಲಿರುವ ತೆಲಂಗಾಣದ ಮಹಾನಗರಪಾಲಿಕೆ ಹಾಗೂ ಮುನಸೀಪಲ್‌ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯದ ಸಚಿವ ಅಶೀಶ್‌ ಶೀಲಾರ್‌ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ಹಾಗೂ ರಾಜಸ್ಥಾನ ಘಟಕದ ಮಾಜಿ ಅಧ್ಯಕ್ಷ ಅಶೋಕ್‌ ಪರ್ಮಾನಿ ಹಾಗೂ ರಾಜ್ಯಸಭೆ ಸದಸ್ಯೆ ಶ್ರೀಮತಿ ರೇಖಾ ಶರ್ಮಾ ಅವರನು ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ತಿಳಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button