ಶಿವಮೊಗ್ಗ:ವಿಬಿಜಿ ರಾಮ್ ಜೀ ಹೊಸ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ|ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ|
ಬದಲಾದ ಕಾಯ್ದೆಯಲ್ಲಿ ಪೂರ್ವನಿರ್ಧಾರಿತ 60 ದಿನ ಯೋಜನೆಗೆ ನಿರ್ಬಂಧವಿದೆ. ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ವಿರುದ್ದವಾಗಿದೆ ಹಾಗಾಗಿ ಮನರೇಗಾ ಉಳಿಸಿಕೊಳ್ಳಬೇಕಾಗಿದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂದು ಆರ್.ಪ್ರಸನ್ನಕುಮಾರ್ ಹೇಳಿದರು.

ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನೇ ಮುಂದುವರಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಶನಿವಾರ ಶಿವಮೊಗ್ಗದ ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ಪ್ರತಿಭಾಟನಾ ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ವಿಬಿಜಿ ರಾಮ್ ಜೀ ಹೊಸ ಕಾಯ್ದೆ ಗುತ್ತಿಗೆದಾರರಿಗೆ ಅವಕಾಶ ನೀಡಿದೆ. ಹಿಂದಿನ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅವಕಾಶ ಇರಲಿಲ್ಲ ಎಂದು ಹೇಳಿದರು.

ನೂತನ ಕಾಯ್ದೆಯು ಗ್ರಾಮ ಪಂಚಾಯ್ತಿಗಳ ಅಧಿಕಾರ ಮೊಟಕುಗೊಳಿಸುವ ಅಪಾಯವಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಮನರೇಗಾ ಯೋಜನೆಯಲ್ಲಿ ಬೇಡಿಕೆ ಅನುಗುಣವಾಗಿ ಕ್ರಿಯಾಯೋಜನೆಯನ್ನ ಗ್ರಾಮಪಂಚಾಯ್ತಿ ಗ್ರಾಮಸಭೆಗಳೇ ರೂಪಿಸಬಹುದಾಗಿತ್ತು. 365 ದಿನಗಳಲ್ಲಿ ಯಾವಾಗ ಬೇಕಾದರೂ ಬೇಡಿಕೆ ಇಟ್ಟು ಉದ್ಯೋಗ ಪಡೆಯುವ ಖಾತ್ರಿ ಒದಗಿಸಿತ್ತು.
ಬದಲಾದ ಕಾಯ್ದೆಯಲ್ಲಿ ಪೂರ್ವನಿರ್ಧಾರಿತ 60 ದಿನ ಯೋಜನೆಗೆ ನಿರ್ಬಂಧವಿದೆ. ಅಧಿಕಾರ ವಿಕೇಂದ್ರೀಕರಣದ ಆಶಯಕ್ಕೆ ವಿರುದ್ದವಾಗಿದೆ ಹಾಗಾಗಿ ಮನರೇಗಾ ಉಳಿಸಿಕೊಳ್ಳಬೇಕಾಗಿದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂದು ಆರ್.ಪ್ರಸನ್ನಕುಮಾರ್ ಹೇಳಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಕಲಗೋಡು ರತ್ನಾಕರ್, ರಾಜ್ಯ ಜವಳಿ ಮೂಲಸೌಕರ್ಯ ನಿಗಮದ ಅಧ್ಯಕ್ಷ ಚೇತನ್ ಗೌಡ, ಭೋವಿ ನಿಗಮದ ಮಾಜಿ ಅಧ್ಯಕ್ಷ ರವಿಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ , ಶಿವಕುಮಾರ್, ರಮೇಶ್ ಮತ್ತಿತರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯುಇಂಡಿಯಾ ಕನ್ನಡ
ಶಿವಮೊಗ್ಗ.







