ಶಿವಮೊಗ್ಗ:ಬಾಲಕಿ ಮೇಲೆ ನಡೆದಿತ್ತು ಲೈಂಗಿಕ ದೌರ್ಜನ್ಯ|ಆರೋಪಿಗೆ 20 ವರುಷ ಜೈಲು ಶಿಕ್ಷೆ| 4 ಲಕ್ಷರೂ. ಪರಿಹಾರ ನೀಡಲು ಸೂಚನೆ
ಆರೋಪಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ ಮತ್ತು ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ: ಮದುವೆಯಾಗುತ್ತೇನೆಂದು ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ದುರುಳನಿಗೆ 20 ವರುಷ ಕಠಿಣ ಶಿಕ್ಷೆ ಹಾಗೂ ಒಂದು ಲಕ್ಷ ರೂ ದಂಡವನ್ನು ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ಆದೇಶ ಹೊರಡಿಸಿದೆ.
ಶಿಕ್ಷೆಗೊಳಗಾಗಿರುವ ಆರೋಪಿಯು 23 ವರ್ಷ ವಯಸ್ಸಿನ ಶಿರಾಳಕೊಪ್ಪದ ನಿವಾಸಿಯಾಗಿದ್ದು, ಪ್ರಕರಣವು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಆರೋಪಿ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕಾಯ್ದೆ ಮತ್ತು ಎಸ್.ಸಿ ಮತ್ತು ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ರೀತ್ಯಾ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸರ್ಕಾರದಿಂದ 4 ಲಕ್ಷರೂ, ಪರಿಹಾರ ನೀಡಲು ಆದೇಶ|
ಪ್ರಕರಣದ ವಿಚಾರಣೆ ನಡೆಸಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್, ಲೈಂಗಿಕ ದೌರ್ಜನ್ಯಗೊಳಗಾಗಿದ್ದ ಬಾಲಕಿ ಈಗಾಗಲೇ ನಿಧನಹೊಂದಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಬಾಲಕಿಯ ಕುಟುಂಬಕ್ಕೆ 4ಲಕ್ಷರೂ. ಪರಿಹಾರ ನೀಡಬೇಕೆಂದು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







