EducationKarnataka

ತೃತೀಯ ಭಾಷೆಗೆ ಗ್ರೇಡ್‌ ವಿವಾದ|ರಾಜ್ಯಪಾಲರಿಂದ ಮುಖ್ಯ ಕಾರ್ಯದರ್ಶಿಗೆ ಪತ್ರ|ನಿರ್ಧಾರ ಮರುಪರಿಶೀಲಿಸುವಂತೆ ಗೆಹ್ಲೋಟ್‌ ಸೂಚನೆ

ತೃತೀಯ ಭಾಷೆಗಳ ಮೇಲೆ ಗ್ರೇಡಿಂಗ್‌ ಪದ್ದತಿ ಜಾರಿಗೊಳಿಸುವ ಬಗ್ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ವಿವರಣೆ ನೀಡುವದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಈಗ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಮಧ್ಯಪ್ರವೇಶಿಸಿದ್ದಾರೆ.

ಗ್ರೇಡ್‌ ನಿಗದಿ ಮಾಡುವ ಕುರಿತು ರಾಜ್ಯ ಸರ್ಕಾರವು ಮರುಪರಿಶೀಲಿಸಬೇಕೆಂದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪರವಾಗಿ ಅವರ ವಿಶೇಷ ಕಾರ್ಯದರ್ಶಿ ಪ್ರಭಾಶಂಕರ್‌ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಪತ್ರ ಬರೆದಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಉದ್ದೇಶಗಳನ್ನು ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ.

ತೃತೀಯ ಭಾಷೆಗಳ ಮೇಲೆ ಗ್ರೇಡಿಂಗ್‌ ಪದ್ದತಿ ಜಾರಿಗೊಳಿಸುವ ಬಗ್ಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ವಿವರಣೆ ನೀಡುವದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಆಯಾಮಗಳಿಂದ ಹಾಗೂ ಸಾಧಕ ಬಾಧಕಗಳನ್ನು ಚರ್ಚೆಯ ನಂತರವೇ ರಾಜ್ಯ ಸರ್ಕಾರವು ಅಂತಿಮವಾಗಿ ಅಂಕಗಳ ಬದಲಿಗೆ ಗ್ರೇಡಿಂಗ್‌ ನೀಡುವದರ ಬಗ್ಗೆ ತೀರ್ಮಾನ ಕೈಗೊಂಡಿದೆ. ಈ ಕುರಿತು ರಾಜ್ಯಪಾಲರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button