ಮೋದಿಯವರ ಬಗ್ಗೆ ಟೀಕಿಸಿದರೇ ಅದು ಸೂರ್ಯನಿಗೆ ಉಗಿದಂತೆ!ಮಲ್ಲಿಕಾರ್ಜುನ್ ಖರ್ಗೆ ಹೇಳಿಕೆಗೆ ಕೆ.ಎಸ್.ಈಶ್ವರಪ್ಪ ಆಕ್ರೋಶ!
ಅಂತರರಾಷ್ಟ್ರೀಯ ಮಟ್ಟದಲ್ಲಿ ಜನನಾಯಕ ಹಾಗೂ ಅಭಿವೃದ್ಧಿ ಶೀಲ ದೇಶದ ನಾಯಕ ಎಂದು ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರಮೋದಿಯವರು ಸರ್ವ ಜನರ ಹೃದಯ ಸಾಮ್ರಾಟ್ ಆಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ಶಿವಮೊಗ್ಗ: ಆರ್‌ಎಸ್‌ಎಸ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದರೆ ಅದು ಸೂರ್ಯನಿಗೆ ಉಗಿದಂತೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಆಡಿದ ಮಾತನ್ನು ತೀವ್ರವಾಗಿ ಖಂಡಿಸಿದ್ದಾರೆ.
ಬುಧವಾರದಂದು ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಆಡುತ್ತಿರುವ ಕನಿಷ್ಟ ಹೇಳಿಕೆ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಜನನಾಯಕ ಹಾಗೂ ಅಭಿವೃದ್ಧಿ ಶೀಲ ದೇಶದ ನಾಯಕ ಎಂದು ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರಮೋದಿಯವರು ಸರ್ವ ಜನರ ಹೃದಯ ಸಾಮ್ರಾಟ್ ಆಗಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಾಮಾನ್ಯ ಜ್ಞಾನ ಮೆರೆತವರು ಮೋದಿ ಅವರ ಬಗ್ಗೆ ಟೀಕಿಸುತ್ತಾರೆ ಎಂದು ಆರೋಪಿಸಿದರು. ಮೋದಿ ಹಾಗೂ ಆರ್‌ಎಸ್‌ಎಸ್ ಅನ್ನು ಗುರಿಯಾಗಿಸಿಕೊಂಡು ಟೀಕಿಸುವ ಕಾಂಗ್ರೆಸ್ ಪಕ್ಷ ಈಗಾಗಲೇ ನಿರ್ನಾಮವಾಗಿದೆ ಎಂದು ಹೇಳಿದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.