DistrictPoliticalShivamogga

ಬಿಎಸ್‌ವೈ ರಾಜಕೀಯ ಸೇವೆಗೆ 50 ವರುಷದ ಸಂಭ್ರಮ|ಅಭಿಮಾನೋತ್ಸವಕ್ಕೆ ಕೆ.ಎಸ್.ಈಶ್ವರಪ್ಪಗೆ ಆಹ್ವಾನ|ಖುದ್ದು ಭೇಟಿಯಾಗಿ ಆಹ್ವಾನಿಸಿದ ಬಿ.ವೈ.ರಾಘವೇಂದ್ರ

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಈಗ ಕೆ.ಎಸ್‌.ಈಶ್ವರಪ್ಪನವರಿಗೆ ಬರಲು ಆಹ್ವಾನ ನೀಡಿರುವುದು ನೋಡಿದಾಗ ಮತ್ತೆ ಅವರು ಬಿಜೆಪಿಗೆ ಹಿಂತಿರುಗುತ್ತಾರೆ ಎಂಬ ಮಾತು ಈಗ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

ಶಿವಮೊಗ್ಗ: ಬಿ.ಎಸ್‌.ಯಡಿಯೂರಪ್ಪ ಅವರು ರಾಜಕೀಯ ಪ್ರವೇಶಿಸಿ 50 ವರ್ಷಗಳ ಸಂದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಮೇ 9 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್‌ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಅವರಿಗೆ ಆಹ್ವಾನಿಸಲಾಗಿದೆ.

ಸಂಸದ ಬಿ.ವೈ.ರಾಘವೇಂದ್ರ ಶುಕ್ರವಾರದಂದು ಕೆ.ಎಸ್‌.ಈಶ್ವರಪ್ಪ ಅವರನ್ನು ಶಿವಮೊಗ್ಗದಲ್ಲಿ ಖುದ್ದಾಗಿ ಭೇಟಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಲು ಆಹ್ವಾನ ಪತ್ರಿಕೆ ನೀಡಿದರು.

ಕಳೆದ ಲೋಕಸಭೆ ಚುನಾವಣೆಗಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಎಸ್‌.ಈಶ್ವರಪ್ಪ ಕಳೆದ ಎರಡು ವರುಷಗಳಿಂದ ಬಿಜೆಪಿಯಿಂದ ದೂರವಾಗಿದ್ದರು.

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಈಗ ಕೆ.ಎಸ್‌.ಈಶ್ವರಪ್ಪನವರಿಗೆ ಬರಲು ಆಹ್ವಾನ ನೀಡಿರುವುದು ನೋಡಿದಾಗ ಮತ್ತೆ ಅವರು ಬಿಜೆಪಿಗೆ ಹಿಂತಿರುಗುತ್ತಾರೆ ಎಂಬ ಮಾತು ಈಗ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

Follow Us

Leave a Reply

Your email address will not be published. Required fields are marked *

Back to top button