ಕುವೆಂಪು ವಿವಿಯಿಂದ ಕೋಣಂದೂರು ಲಿಂಗಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರಧಾನ|ಸಚಿವ ಮಧು ಬಂಗಾರಪ್ಪ, ಶರತ್ ಅನಂತಮೂರ್ತಿ ಭಾಗಿ
ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕುವೆಂಪು ವಿವಿ ಶರತ್ ಅನಂತ್ಮೂರ್ತಿ ಹಾಗೂ ವಿವಿಯ ಹಲವು ಪ್ರಮುಖರು ಖುದ್ದು ಕೋಣಂದೂರು ಲಿಂಗಪ್ಪನವರ ಅವರ ಮನೆಗೆ ತೆರಳಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಿದರು.

ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಸಮಾಜವಾದಿ ಕೋಣಂದೂರು ಲಿಂಗಪ್ಪನವರಿಗೆ ಅವರಿಗೆ ಕುವೆಂಪು ವಿಶ್ವವಿದ್ಯಾಲಯವು ಶುಕ್ರವಾರದಂದು ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಿ ಗೌರವಿಸಿತು.
ಇತ್ತೀಚೆಗೆ ವಿವಿಯಲ್ಲಿ ನಡೆದ 35 ನೇ ಘಟಿಕೋತ್ಸವ ಸಮಾರಂಭಕ್ಕೆ ಅನಾರೋಗ್ಯದಿಂದ ಕೋಣಂದೂರು ಲಿಂಗಪ್ಪನವರು ಹಾಜರಾಗಿರಲಿಲ್ಲ.
ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕುವೆಂಪು ವಿವಿ ಶರತ್ ಅನಂತ್ಮೂರ್ತಿ ಹಾಗೂ ವಿವಿಯ ಹಲವು ಪ್ರಮುಖರು ಖುದ್ದು ಕೋಣಂದೂರು ಲಿಂಗಪ್ಪನವರ ಅವರ ಮನೆಗೆ ತೆರಳಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಿ ಗೌರವಿಸಿದರು.
ನಿಮ್ಮ ಭೇಟಿ, ನನ್ನ ಪುಣ್ಯ-ಮಧು ಬಂಗಾರಪ್ಪ|
ಶುಕ್ರವಾರದಂದು ಖುದ್ದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದ ನಂತರ ಕುಶಲೋಪರಿ ಮಾತುಕತೆ ನಡೆಸಿದರು.
ಈ ವೇಳೆ ತಮ್ಮಂತಹ ಹಿರಿಯ ಸಮಾಜ ಜೀವಿಯನ್ನು ಭೇಟಿಯಾಗಿದ್ದು ತಮ್ಮ ಪುಣ್ಯ ಎಂದು ಅವರ ಆಶೀರ್ವಾದ ಪಡೆದರು.
ತಮ್ಮಂತಹ ಹಿರಿಯರಿಗೆ ಡಾಕ್ಟರೇಟ್ ಲಭಿಸಿರುವುದು ಅತ್ಯಂತ ಸಂತಸದ ವಿಷಯ ಎಂದು ಹೇಳಿದ ಸಚಿವರು, ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ರಾಜಕೀಯ ಜೀವನದ ಘಟನೆಯನ್ನು ಈ ಸಂದರ್ಭದಲ್ಲಿ ಹಂಚಿಕೊಂಡರು.
ಹುಟ್ಟೂರಿಗೆ ತೆರಳಲು ಕುವೆಂಪು ಇಂಗಿತ|
ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಿದ್ದ ಎಸ್.ಬಂಗಾರಪ್ಪ|
ಬಂಗಾರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಮೈಸೂರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಕುವೆಂಪುರವರನ್ನು ಭೇಟಿಯಾಗಲು ಅವರ ಮನೆಗೆ ಎಸ್ ಬಂಗಾರಪ್ಪ ತೆರಳಿದ್ದರು.

ಆಗ ಕುವೆಂಪುರವರು ಕುವೆಂಪುರವರು, ಕುಪ್ಪಳಿಯ ತಮ್ಮ ಮನೆಯನ್ನು ನೋಡಬೇಕೆಂಬ ಇಂಗಿತ ವ್ಯಕ್ತಪಡಿಸಿದರು.
ಆಗ ಸ್ವತಃ ಬಂಗಾರಪ್ಪನವರು, ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ್ದರಲ್ಲದೇ ಅಂದಿನ ಸಚಿವರಾಗಿದ್ದ ಮಲ್ಲಿಕಾರ್ಜುನಯ್ಯ ಹಾಗೂ ಹಾಗೂ ವೈದ್ಯರ ತಂಡದೊಂದಿಗೆ ಕುವೆಂಪುರವರಿಗೆ ಮನೆ ತೋರಿಸಿ, ಅವರನ್ನು ಗೌರವದಿಂದ ಕರೆತಂದಿದ್ದರು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡರು.

ಅಂದಿನ ದಿನಗಳಲ್ಲಿ ಇದ್ದಂತಹ ಬದ್ಧತೆ ಮತ್ತು ಹಿರಿಯರ ಬಗ್ಗೆ ಇದ್ದ ಗೌರವ ಇಂದು ಮಾದರಿಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಶಿಕ್ಷಣ ವ್ಯವಸ್ಥೆ, ಫಲಿತಾಂಶದ ಬಗ್ಗೆ ವಿವರಣೆ|
ತಮ್ಮ ಅನಾರೋಗ್ಯದ ಮಧ್ಯೆಯು ಕೋಣಂದೂರು ಲಿಂಗಪ್ಪನವರು ತಮ್ಮ ಮನೆಗೆ ಆಗಮಿಸಿದ್ದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಬಳಿ ಹಾಲಿ ಶಿಕ್ಷಣ ವ್ಯವಸ್ಥೆ, ಫಲಿತಾಂಶದ ಬಗ್ಗೆ ವಿಚಾರಿಸಿದರು.

ರಾಜ್ಯದಲ್ಲಿ ಎಸ್ಎಸ್ಎಲ್ಸಿ ಯಲ್ಲಿ ಶೇ. 94.10 ಫಲಿತಾಂಶ ಪಡೆಯುವ ಮೂಲಕ ಈ ಬಾರಿ ಐತಿಹಾಸಿಕ ಸಾಧನೆ ದಾಖಲಾಗಿದೆ ಎಂದು ತಿಳಿಸಿದರು. ಹಿಂದೆ ಈ ಪ್ರಮಾಣವು ಶೇ. 70-80 ರಷ್ಟಿರುತ್ತಿತ್ತು.
ಪೂರಕ ಪರೀಕ್ಷೆಯ ಬದಲಾಗಿ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವ ಸರ್ಕಾರದ ಹೊಸ ನೀತಿಯು ವಿದ್ಯಾರ್ಥಿಗಳಿಗೆ ವರದಾನವಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಪರೀಕ್ಷೆ ಮುಗಿದ 20 ದಿನಗಳಲ್ಲೇ ಮತ್ತೊಂದು ಅವಕಾಶ ನೀಡುವುದರಿಂದ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಿದೆ ಎಂದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವುದೇ ನಮ್ಮ ಸರ್ಕಾರದ ಗುರಿ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಕುವೆಂಪು ವಿಶ್ವವಿದ್ಯಾಲಯದ ಕುಲ ಸಚಿವ ಹೇಮಂತ್ ಎನ್, ವಿವಿ ಸಿಂಡಿಕೇಟ್ ಸದಸ್ಯರು, ಇತರೆ ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.








