DistrictEducationShivamogga

ಶಿವಮೊಗ್ಗ : NEET ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ವಿಫಲ|ದೇಶಾದ್ಯಂತ ಯುವ ಕಾಂಗ್ರೆಸ್‌ ಪ್ರತಿಭಟನೆ|ಸಂಸದ ರಾಘವೇಂದ್ರ ನಿವಾಸಕ್ಕೆ ಮುತ್ತಿಗೆ ಯತ್ನ

ವಿನೋಬನಗರದಲ್ಲಿರುವ ಸಂಸದ ಬಿವೈ ರಾಘವೇಂದ್ರರವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನ ಮಧ್ಯದಲ್ಲೇ ತಡೆದು ವಶಕ್ಕೆ ಪಡೆದರು.

ಶಿವಮೊಗ್ಗ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ತಡೆಯಲು ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಭಾರತೀಯ ಯುವ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆಕೊಟ್ಟಿದೆ.

ಈ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿಯು ಸಹ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರದಂದು ಪ್ರತಿಭಟನೆ ನಡೆಸಿದ್ದು, ಸಂಸದ ಬಿವೈ ರಾಘವೇಂದ್ರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ವೈದ್ಯಕೀಯ ಪದವಿ ಶಿಕ್ಷಣ ಪಡೆಯಲು ರಾಷ್ಟ್ರ ಮಟ್ಟದಲ್ಲಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ( NEET) ಅನ್ನು ನೀಟಾಗಿ ನಡೆಸಲು ಕೇಂದ್ರ ಸರ್ಕಾರ ವಿಫಲವಾಗಿದೆ.

ವೈದ್ಯರಾಗುವ ಕನಸು ಹೊತ್ತ ಲಕ್ಷಾಂತರ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯವಂತೆ ಮಾಡಿರುವುದನ್ನ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದರು.

ವಿನೋಬನಗರದಲ್ಲಿರುವ ಸಂಸದ ಬಿವೈ ರಾಘವೇಂದ್ರರವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಪ್ರತಿಭಟನಾಕಾರರನ್ನ ಮಧ್ಯದಲ್ಲೇ ತಡೆದು ವಶಕ್ಕೆ ಪಡೆದರು.

ಇದಕ್ಕೂ ಮುನ್ನ ಪೊಲೀಸ್ ಚೌಕಿಯಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.

ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇಜವಾಬ್ದಾರಿ ಕೇಂದ್ರ ಸರ್ಕಾರವನ್ನು ಕೂಡಲೇ ವಜಾಗೊಳಿಸಿ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ವಿಶ್ವಾಸ ಮೂಡುವಂತೆ ಮಾಡಬೇಕೆಂದು ಪ್ರತಿಭಟನಾಕಾರರು ಮನವಿ ಮೂಲಕ ರಾಷ್ಟ್ರಪತಿಗಳಿಗೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಯುವ ಮುಖಂಡರಾದ ಮಧುಸೂದನ್, ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷ ನಾಯಕಿ ಯಮನರಂಗೇಗೌಡ, ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷರಾದ ಹರ್ಷಿತ್ ಗೌಡ, ನಗರಾಧ್ಯಕ್ಷರಾದ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಗಿರೀಶ್, ಸಕ್ಲೇನ್,ಅಶೋಕ್, ರವಿ, ವಿಷ್ಣು, ಬಾಬು,ತೌಫಿಕ್, ಭಾಗಿಯಾಗಿದ್ದರು.

Follow Us

Leave a Reply

Your email address will not be published. Required fields are marked *

Back to top button