BallariDistrictKarnataka

ಬಳ್ಳಾರಿ ಬ್ಯಾನರ್‌ ಗಲಭೆ ವಿಚಾರ| ಬೆಂಗಳೂರಿಗೆ ಪಾದಯಾತ್ರೆ ಘೋಷಿಸಿದ ಬಿ.ಶ್ರೀರಾಮುಲು|ವರಿಷ್ಠರಿಂದ ಇನ್ನು ಅನುಮತಿ ಸಿಕ್ಕಿಲ್ಲ-ಬಿ.ವೈ.ವಿಜಯೇಂದ್ರ| ಯಾತ್ರೆ ಮುನ್ನವೇ ಗೊಂದಲ!

ಪಾದಯಾತ್ರೆ ಕೇವಲ ಮಾಜಿ ಸಚಿವರಾದ ಜಿ.ಜನಾರ್ಧನ್‌ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರ ತೀರ್ಮಾನವಲ್ಲ. ಇದು ಇಡಿ ಪಕ್ಷದ ತೀರ್ಮಾನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಬಳ್ಳಾರಿ ಬ್ಯಾನರ್‌ ಗಲಾಟೆ ವಿರೋಧಿಸಿ ಬಳ್ಳಾರಿಯಿಂದ ಬೆಂಗಳೂರಗೆ ಬಿಜೆಪಿ ಬೃಹತ್‌ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಘೋಷಿಸಿದ್ದಾರೆ.

ಜನೆವರಿ 17 ರಂದು ಬಳ್ಳಾರಿಯಿಂದ ಆರಂಭಗೊಳ್ಳುವ ಪಾದಯಾತ್ರೆಯು ಫೆ.5ರಂದು ಬೆಂಗಳೂರಿಗೆ ತಲುಪಲಿದೆ ಎಂದು ಅವರು ಹೇಳಿದರು.

ಮಾಜಿ ಸಚಿವ ಜಿ.ಜನಾರ್ಧನ್‌ ರೆಡ್ಡಿ ಅವರ ಬಳ್ಳಾರಿಯ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾದಯಾತ್ರೆ ಆರಂಭಕ್ಕೂ ಮುನ್ನ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಶ್ರೀರಾಮುಲು ತಿಳಿಸಿದರು. ಮಾಜಿ ಸಚಿವ ಜಿ.ಜನಾರ್ಧನ್‌ ರೆಡ್ಡಿ ಉಪಸ್ಥಿತರಿದ್ದರು.

ಬಳ್ಳಾರಿಯಿಂದ ಬೆಂಗಳೂರುವರೆಗಿನ ಬಿಜೆಪಿ ಪಾದಯಾತ್ರೆ ಮಾಡುವದಾಗಿ ಮಾಜಿ ಸಚಿವ ಶ್ರೀರಾಮುಲು ಘೋಷಿಸಿದ ಬೆನ್ನಲ್ಲೆ ಚಿತ್ರದುರ್ಗ ಪ್ರವಾಸದಲ್ಲಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ್‌ ಭಿನ್ನ ಪ್ರತಿಕ್ರಿಯೆ ನೀಡಿದ್ದಾರೆ.

ಪಾದಯಾತ್ರೆ ಕೇವಲ ಮಾಜಿ ಸಚಿವರಾದ ಜಿ.ಜನಾರ್ಧನ್‌ ರೆಡ್ಡಿ ಮತ್ತು ಬಿ.ಶ್ರೀರಾಮುಲು ಅವರ ತೀರ್ಮಾನವಲ್ಲ. ಇದು ಇಡಿ ಪಕ್ಷದ ತೀರ್ಮಾನವಾಗಿದೆ ಎಂದು ಹೇಳಿದರು.

ಆದರೆ ದೆಹಲಿ ವರಿಷ್ಠರು ಒಪ್ಪಿಗೆ ನೀಡಬೇಕಿದೆ ಎಂದು ತಿಳಿಸಿದ್ದು, ಇದರಿಂದ ಪಾದಯಾತ್ರೆ ವಿಚಾರವಾಗಿ ಬಿಜೆಪಿಯಲ್ಲಿನ ಗೊಂದಲ ಬಹಿರಂಗವಾಗಿದೆ.

ದೆಹಲಿ ವರಿಷ್ಠರ ಒಪ್ಪಿಗೆ ನಂತರವೇ ಪಾದಯಾತ್ರೆಯ ಬಗ್ಗೆ ಅಧಿಕೃತ ಘೋಷಣೆ ಮಾಡುವದಾಗಿ ಅವರು ಹೇಳಿದ ಅವರು, ಒಂದೆರಡು ದಿನಗಳಲ್ಲಿ ಈ ಬಗ್ಗೆ ಸ್ಪಷ್ಡತೆ ಸಿಗಲಿದೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button