ಶರಾವತಿ ಪಂಪ್ಡ್ ಸ್ಟೋರೇಜ್ ಜಾರಿ ಹಿಂದೆ ಬಿದ್ದರೇ ಹುಷಾರ್|ಸಿದ್ದರಾಮಯ್ಯರಂತೇ ಡಿಕೆಶಿ ಸಹ ಮಾಜಿಯಾಗೋದು ಫಿಕ್ಸ್..|ಯೋಜನೆಗೆ ಅನುಮತಿ ಕೊಡಬೇಡಿ..ಪ್ರಧಾನಿಗೆ ಈಶ್ವರಪ್ಪ ಮನವಿ
ಡಿಪಿಆರ್ ಇಲ್ಲದೇ ಎಲ್ಲ ನಿಯಮ ,ಕಾನೂನುಗಳನ್ನ ಗಾಳಿಗೆ ತೂರಿ ಟೆಂಡರ್ ಕರೆದಿರುವ ಎಕೈಕ ಯೋಜನೆಯಂದ್ರೆ ಅದು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.

ಶಿವಮೊಗ್ಗ: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿಗೆ ಅನುಮತಿ ನೀಡುವಂತೆ ಪ್ರಧಾನಿಗೆ ಬೇಡಿಕೆ ಸಲ್ಲಿಸಿರುವ ಸಿಎಂ ಡಿಕೆ ಶಿವಕುಮಾರ್ ಶೀಘ್ರದಲ್ಲೇ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.
ಈ ಹಿಂದೆ ಇದೇ ಯೋಜನೆ ಜಾರಿಗೆ ಬೆನ್ನು ಬಿದ್ದಿದ್ದ ಸಿದ್ದರಾಮಯ್ಯ ಅವರು ಸಹ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದು ಈಗ ನಿಜವಾಗಿದೆ ಎಂದರು.

ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಜನವಿರೋಧಿ ಕ್ರಮಕ್ಕೆ ಮುಂದಾಗಬಾರದು ಎಂದು ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದ್ದಾರೆ.

ಬುಧವಾರದಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಡಿಸಿಎಂ, ಇತ್ತೀಚೆಗೆ ಕೇಂದ್ರ ಸರ್ಕಾರಕ್ಕೆ ಶಿವಕುಮಾರ್ ಅವರು ಸಲ್ಲಿಸಿರುವ ಬೇಡಿಕೆಗಳಲ್ಲಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯು ಸಹ ಒಂದಾಗಿದೆ ಎಂದು ಬಹಿರಂಗಪಡಿಸಿದರು.

ಈ ಹಿನ್ನೆಲೆಯಲ್ಲಿ ಪರಿಸರಕ್ಕೆ ಮಾರಕವಾಗಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಅನುಮತಿ ನೀಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಈ ಕುರಿತು ರಾಷ್ಟ್ರಭಕ್ತರ ಬಳಗ ಮತ್ತು ಪರಿಸರಕ್ಕಾಗಿ ನಾವು ಸಂಘಟನೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಿಯಮ ಗಾಳಿಗೆ|
ಡಿಪಿಆರ್ ಇಲ್ಲದೇ ಟೆಂಡರ್|
ಡಿಪಿಆರ್ ಇಲ್ಲದೇ ಎಲ್ಲ ನಿಯಮ ,ಕಾನೂನುಗಳನ್ನ ಗಾಳಿಗೆ ತೂರಿ ಟೆಂಡರ್ ಕರೆದಿರುವ ಎಕೈಕ ಯೋಜನೆಯಂದ್ರೆ ಅದು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಾಗಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಕಿಡಿಕಾರಿದರು.
ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿ ಇಂತಹ ಘಟನೆ ನೋಡಿರಲಿಲ್ಲ ಎಂದು ಹೇಳಿದರು. ಪ್ರಸ್ತುತ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇರುವಾಗಲೇ ಕೇಂದ್ರಕ್ಕೆ ಯೋಜನೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿದೆ.
ಕೇಂದ್ರ ಪರಿಸರ ಇಲಾಖೆ ಸೇರಿದಂತೆ ವಿವಿಧ ತಜ್ಞರುಗಳು ಯೋಜನೆ ಕಾರ್ಯಸಾಧುವಲ್ಲ ಎಂದೇ ವರದಿ ನೀಡಿದ್ದಾರೆ. ಆರಂಭದಲ್ಲಿ ಮೂರು ಸಾವಿರ ಕೋಟಿ ಅಂದಾಜು ವೆಚ್ಚ ಇದೀಗ ಹತ್ತು ಸಾವಿರ ಕೋಟಿಗೆ ತಲುಪಿರುವುದು ಸಂಶಯಕ್ಕೆ ಕಾರಣವಾಗಿದೆ ಎಂದು ಅಸಮಧಾನ ಹೊರಹಾಕಿದರು.
ಇನ್ನು ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಸಾಗರದ ಕಾರ್ಗಲ್ನಲ್ಲಿ ಜೂನ್ 28 ರಂದು ರಾಷ್ಟ್ರಭಕ್ತ ಬಳಗದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸುಮಾರ ಎರಡೂವರೆ ಸಾವಿರ ಪರಿಸರಪ್ರೇಮಿಗಳು ಭಾಗಿಯಾಗಲಿದ್ದಾರೆ ಎಂದು ಕಾಂತೇಶ್ ಹೇಳಿದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







