Shivmogga:ಭದ್ರಾ ಅಚ್ಚುಕಟ್ಟು ಪ್ರದೇಶ ಆಡಳಿತ ಹಸ್ತಾಂತರಕ್ಕೆ ರೈತರ ವಿರೋಧ|ನಿರ್ಧಾರ ಕೈಬಿಡದಿದ್ದರೆ ಚಳುವಳಿ-ಎಚ್.ಆರ್.ಬಸವರಾಜಪ್ಪ ಎಚ್ಚರಿಕೆ
ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಕೈಬಿಡದಿದ್ದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು, ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರದ ವಿರುದ್ಧ ಚಳುವಳಿ ಮಾಡಬೇಕಾದಿತು ಎಂದು ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ: ಭದ್ರಾ ಅಣೆಕಟ್ಟು ಮತ್ತು ಅಚ್ಚುಕಟ್ಟು ಪ್ರದೇಶದ (ಭದ್ರಾ ಯೋಜನಾ ವೃತ್ತ) ಆಡಳಿತವನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.
ಸರ್ಕಾರವು ತನ್ನ ನಿರ್ಧಾರವನ್ನು ಕೈಬಿಡದಿದ್ದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು, ಜನಪ್ರತಿನಿಧಿಗಳು ಸೇರಿದಂತೆ ಸರ್ಕಾರದ ವಿರುದ್ಧ ಚಳುವಳಿ ಮಾಡಬೇಕಾದಿತು ಎಂದು ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗದ ಪ್ರೆಸ್ ಟ್ರಸ್ಟ್‌ನ ಪತ್ರಿಕಾ ಭವನದಲ್ಲಿ ಬುಧವಾರದಂದು ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಭದ್ರಾ ಜಲಾಶಯ ತರೀಕೆರೆ ಲಕ್ಕವಳ್ಳಿ ಗ್ರಾಮದ ಬಳಿ ಸಮುದ್ರ ಮಟ್ಟದಿಂದ ಸರಾಸರಿ 601 ಮೀಟರ್ ಎತ್ತರದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ ಎಂದು ಹೇಳಿದರು.
ಜಲಾಶಯದ ಸಂಗ್ರಹಣಾ ಸಾಮರ್ಥ್ಯ 71.531 ಟಿ.ಎಂ.ಸಿ. ಈ ಜಲಾಶಯದಿಂದ 1965ನೇ ಸಾಲಿನಿಂದ ಕಾಲುವೆಗಳಲ್ಲಿ ನೀರನ್ನು ಹರಿಸಲಾಗಿದೆ ಎಂದರು.
ಈ ಯೋಜನೆಯಿಂದ 2,53,292ಎಕರೆಗಳಿಗೆ ಶಿವಮೊಗ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ರೈತರಿಗೆ 2 ಬೆಳೆಗಳಿಗೆ ನೀರು ಕೊಡಲಾಗುತ್ತಿದೆ. ಜೊತೆಗೆ ನದಿ ಮುಖಾಂತರ, ಕಾಲುವೆ ಮುಖಾಂತರ ಜಲಾಶಯದಿಂದ ಕುಡಿಯುವ ನೀರು, ಕೈಗಾರಿಕೆಗಳಿಗೆ ಸಹ ನೀರು ಹಂಚಿಕೆ ಮಾಡಲಾಗಿದೆ.

ಈ ಜಲಾಶಯಕ್ಕೆ ಸಂಬಂಧ ಪಟ್ಟಂತೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹ ಇದ್ದು ಅಚ್ಚಕಟ್ಟು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ಹೇಳಿದರು.
ಭದ್ರಾ ನೀರಾವರಿ ಯೋಜನಾ ವೃತ್ತದಿಂದ ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.
ಈ ಯೋಜನಾ ವೃತ್ತವನ್ನು ಕರ್ನಾಟಕ ನೀರಾವರಿ ನಿಗಮದಿಂದ ಬೇರ್ಪಡಿಸಿ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಹಸ್ತಾಂತರಿಸುವುದಾಗಿ ತಿಳಿದು ಬಂದಿದೆ ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ಹೇಳಿದರು.
ಇದನ್ನು ಯಾವುದೇ ಕಾರಣಕ್ಕೂ ಈ ಭಾಗದ ರೈತರು ಒಪ್ಪುವುದಿಲ್ಲ ಎಂದು ಹೇಳಿದ ಅವರು, ಈ ಯೋಜನಾ ವೃತ್ತವನ್ನು ಹಸ್ತಾಂತರ ಮಾಡದೇ ಈಗಿರುವ ಹಾಗೆಯೇ ಆಡಳಿತ ನಡೆಸಲು ಅನುಕೂಲ ಮಾಡಿಕೊಡಬೇಕು ಎಂದು ರೈತ ಮುಖಂಡ ಎಚ್.ಆರ್.ಬಸವರಾಜಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







