KarnatakaPoliticalSpecial Stories

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಜಾತಿಗಳನ್ನು ಒಡೆಯುವ ಹುನ್ನಾರ-ಬಿ ವೈ ವಿಜಯೇಂದ್ರ ಗಂಭೀರ ಆರೋಪ

ಜಾತಿ ಜನಗಣತಿ ಮಾಡಲು ರಾಜ್ಯಗಳಿಗೆ ಅಧಿಕಾರ ಇಲ್ಲದಿದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಲಾಗಿದೆ. ಹಲವು ಉಪಪಂಗಡಗಳನ್ನು ಸೇರಿಸುವ ಮೂಲಕ ಗೊಂದಲ ಮೂಡಿಸಲಾಗಿದೆ ಎಂದು ಬಿ ವೈ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಮೂಲಕ ಜಾತಿಗಳನ್ನು ಒಡೆಯುವ ಹುನ್ನಾರವನ್ನು ಸಿದ್ದರಾಮಯ್ಯ ಸಕಾ೯ರ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದ್ದಾರೆ. ದೇಶದ ಹಿತದೃಷ್ಟಿಯಿಂದ ಧಮ೯ದ ಕಾಲಂನಲ್ಲಿ ಹಿಂದೂ ಎಂದು ನಮೂದಿಸಬೇಕೆಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಜಕೀಯ ಚಿಂತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜಾತಿ ಜನಗಣತಿ ಮಾಡಲು ರಾಜ್ಯಗಳಿಗೆ ಅಧಿಕಾರ ಇಲ್ಲದಿದ್ದರೂ 47 ಹೊಸ ಜಾತಿಗಳನ್ನು ಸೃಷ್ಟಿಸಲಾಗಿದೆ. ಹಲವು ಉಪಪಂಗಡಗಳನ್ನು ಸೇರಿಸುವ ಮೂಲಕ ಗೊಂದಲ ಮೂಡಿಸಲಾಗಿದೆ ಎಂದು ಬಿ ವೈ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದಿನ ಕಾಂತರಾಜು ಆಯೋಗದ ವರದಿಯು ಅವೈಜ್ಞಾನಿಕ ಎಂದು ಬಿಜೆಪಿ ಆಗಲೇ ವಿರೋಧಿಸಿತ್ತು. ಬಳೀಕ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದ್ದಾರೆಂದು ಕಾಂತರಾಜು ಅವರ ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾರೆ ಎಂದರು. ಈ ಹಿಂದೆ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧಮ೯ ಎಂದು ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯನವರು ಮಾಡಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ , ಜಿಎಸ್‌ಟಿ ಕಡಿತ ಗೊಳಿಸಿ ಜನಸಾಮಾನ್ಯರ ಮೇಲೆ ತೆರಿಗೆ ಹೊರೆ ಇಳಿಸುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ಶ್ರೀಮತಿ ನಿಮ೯ಲಾ ಸೀತಾರಾಮನ್‌ ಅವರನ್ನು ಅಭಿನಂದಿಸುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಸಮೀಕ್ಷೆ (ಜಾತಿಗಣತಿಯ) ಮೂಲಕ ಜಾತಿಗಳನ್ನು ಒಡೆಯುವ ಹುನ್ನಾರವನ್ನು ಬಯಲಿಗೆಳಯಬೇಕು. ಹಾಗೂ ಎಲ್ಲಾ ಜಾತಿ ಬಾಂಧವರು ‘ಹಿಂದೂ’ ಎಂದು ನಮೂದಿಸಲು ಜಾಗೃತಿ ಮೂಡಿಸುವ ಕುರಿತು ಎರಡು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಇದು ಪಕ್ಷದ ಕಾಯ೯ಕತ೯ರಿಗೆ , ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾಯ೯ದಶಿ೯ ಬಿ ಎಲ್‌ ಸಂತೋಷ್‌ ಅವರು ನೀಡಿದ ಖಡಕ ಟಾಸ್ಕ್‌.

ಎರಡು ದಿನಗಳ ಕಾಲ ನಡೆದ ಬಿಜೆಪಿ ರಾಜಕೀಯ ಚಿಂತನ ಶಿಬಿರದ ಸಮಾರೋಪ ಕಾಯ೯ಕ್ರಮದಲ್ಲಿ ಮಾತನಾಡಿದ ಅವರು, ಕಾಯ೯ಕತ೯ರಿಂದ ಹಿಡಿದು ರಾಜ್ಯ ಮಟ್ಟದ ಮುಖಂಡರುಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು.

ಅಧಿಕಾರ ನಮಗೆ ಮಾತ್ರ ಎಂಬ ಧೋರಣೆಯನ್ನು ಬಿಟ್ಟು, ಸಾಂಘಿಕವಾಗಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಂದೇ ಮನಸ್ಸಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಏಪ೯ಡಿಸಿದ್ದ ರಾಜಕೀಯ ಶಿಬಿರದಲ್ಲಿ ಪಾಲ್ಗೊಂಡಿರುವ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ

ಬಿಜೆಪಿ ರಾಜಕೀಯ ಚಿಂತನ ಶಿಬಿರದಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ಧರ್ಮೇಂದ್ರ ಪ್ರಧಾನ, ವಿ ಸೋಮಣ್ಣ ,ರಾಜ್ಯ ಬಿಜೆಪಿ ಉಸ್ತುವಾರಿ ಡಾ.ರಾಧಾಮೋಹನ್‌, ಸಹ ಉಸ್ತುವಾರಿ ಸುಧಾಕರ್‌ ರೆಡ್ಡಿ, ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌ ಅಶೋಕ್, ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಸೇರಿದಂತೆ ಅನೇಕ ಮುಖಂಡರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button