Narendra Modi@75-ಮೋದಿಗೆ ಕರೆ ಮಾಡಿ Happy Birth Day ಎಂದ Donald Trump -ಧನ್ಯವಾದ ಸ್ನೇಹಿತ ಎಂದ ಪ್ರಧಾನಿ ಮೋದಿ
ಬುಧವಾರದಂದು ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬದಂದು ಫೋನ್ ಕರೆ ಮಾಡಿದ್ದರು. ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದೆ. ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

75 ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವದ ಅನೇಕ ನಾಯಕರುಗಳು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಆಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಂದು ದಿನ ಮುಂಚಿತವಾಗಿಯೇ ಮಂಗಳವಾರದಂದು ಖುದ್ದು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಇದಕ್ಕೆ ಪ್ರತಿಯಾಗಿ ಫೋನ್ ಕರೆಯಲ್ಲಿಯೇ ಧನ್ಯವಾದ ಸಲ್ಲಿಸಿರುವ ಮೋದಿ, ತಮ್ಮ ಎಕ್ಸ್ ಖಾತೆಯಲ್ಲಿ ಸಹ ಧನ್ಯವಾದ ತಿಳಿಸಿದ್ದಾರೆ. ಬುಧವಾರದಂದು ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬದಂದು ಫೋನ್ ಕರೆ ಮಾಡಿದ್ದರು.
ಅವರ ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿರುವ ಮೋದಿ, ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬುಧವಾರ ರಾತ್ರಿ 10 ಗಂಟೆ 53 ನಿಮಿಷಕ್ಕೆ ಈ ವಿಷಯ ಹಂಚಿಕೊಂಡಿದ್ದಾರೆ.
ವರದಿ: ವಿಜಯೀಂದ್ರ ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು


