InternationalNationalNew DelhiPoliticalSpecial Storiesಮೋದಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ

Narendra Modi@75-ಮೋದಿಗೆ ಕರೆ ಮಾಡಿ Happy Birth Day ಎಂದ Donald Trump -ಧನ್ಯವಾದ ಸ್ನೇಹಿತ ಎಂದ ಪ್ರಧಾನಿ ಮೋದಿ

ಬುಧವಾರದಂದು ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬದಂದು ಫೋನ್ ಕರೆ ಮಾಡಿದ್ದರು. ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದೆ. ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

75 ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವದ ಅನೇಕ ನಾಯಕರುಗಳು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಆಮೇರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದು ದಿನ ಮುಂಚಿತವಾಗಿಯೇ ಮಂಗಳವಾರದಂದು ಖುದ್ದು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ, ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಇದಕ್ಕೆ ಪ್ರತಿಯಾಗಿ ಫೋನ್‌ ಕರೆಯಲ್ಲಿಯೇ ಧನ್ಯವಾದ ಸಲ್ಲಿಸಿರುವ ಮೋದಿ, ತಮ್ಮ ಎಕ್ಸ್‌ ಖಾತೆಯಲ್ಲಿ ಸಹ ಧನ್ಯವಾದ ತಿಳಿಸಿದ್ದಾರೆ. ಬುಧವಾರದಂದು ನನ್ನ ಸ್ನೇಹಿತ ಅಧ್ಯಕ್ಷ ಟ್ರಂಪ್, ನನ್ನ 75 ನೇ ಹುಟ್ಟುಹಬ್ಬದಂದು ಫೋನ್ ಕರೆ ಮಾಡಿದ್ದರು.

ಅವರ ಆತ್ಮೀಯ ಶುಭಾಶಯಗಳಿಗಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದಿರುವ ಮೋದಿ, ಭಾರತ-ಯುಎಸ್ ಸಮಗ್ರ ಮತ್ತು ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ನಾನು ಸಂಪೂರ್ಣವಾಗಿ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

ಉಕ್ರೇನ್ ಸಂಘರ್ಷದ ಶಾಂತಿಯುತ ಪರಿಹಾರಕ್ಕಾಗಿ ನಿಮ್ಮ ಉಪಕ್ರಮಗಳನ್ನು ನಾವು ಬೆಂಬಲಿಸುತ್ತೇವೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬುಧವಾರ ರಾತ್ರಿ 10 ಗಂಟೆ 53 ನಿಮಿಷಕ್ಕೆ ಈ ವಿಷಯ ಹಂಚಿಕೊಂಡಿದ್ದಾರೆ.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button