DistrictShivamogga

“ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ” ಎಸ್‌ಐಆರ್‌ ಯೋಜನೆ| ಶಿಕಾರಿಪುರದಲ್ಲಿ “BLA-2” ಕಾರ್ಯಕರ್ತರ ವಿಶೇಷ ಕಾರ್ಯಾಗಾರ| ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ

ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ, "ಒಬ್ಬ ವ್ಯಕ್ತಿ, ಒಂದು ಮತ"ವನ್ನು ಸಾಕಾರಗೊಳಿಸುವ ಪ್ರಕ್ರಿಯೆ ಕುರಿತು ಸಂಸದ ಬಿ ವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.

ಕೇಂದ್ರ ಚುನಾವಣಾ ಆಯೋಗವು ದೇಶದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ನೂತನವಾಗಿ ಜಾರಿಗೆ ತಂದಿರುವ “ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ” ಎಸ್‌ಐಆರ್‌ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಲು ಬಿಜೆಪಿ ಶಿಕಾರಿಪುರ ತಾಲೂಕು ಮಂಡಲ ವತಿಯಿಂದ ಬೂತ್ ಮಟ್ಟದ “BLA-2” ಕಾರ್ಯಕರ್ತರ ವಿಶೇಷ ಕಾರ್ಯಾಗಾರವನ್ನು ಗುರುವಾರದಂದು ಏರ್ಪಡಿಸಲಾಗಿತ್ತು.

ಶಿವಮೊಗ್ಗ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ, ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಕ್ಷೇತ್ರದ ಶಾಸಕ ಬಿ ವೈ ವಿಜಯೇಂದ್ರ ಭಾಗವಹಿಸಿ ಮಾಹಿತಿ ನೀಡಿದರು.

ಬೂತ್ ಮಟ್ಟದ ಕಾರ್ಯಕರ್ತರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಂಪರ್ಕ ಸಾಧಿಸುವುದು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಗಳ ಬಗ್ಗೆ ಮೊದಲಿಗೆ ಬೂತ್ ಕಾರ್ಯಕರ್ತರಲ್ಲಿ ಜಾಗೃತಿ ಮೂಡಿಸುವುದು ಸೇರಿದಂತೆ ವಿಶೇಷ ತೀವ್ರ ಪರಿಷ್ಕರಣೆಯು (SIR) ಅಗತ್ಯತೆಯ ಬಗ್ಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಲಾಯಿತು.

ವಿಶೇಷ ತೀವ್ರ ಪರಿಷ್ಕರಣೆಯು ಮತದಾರರ ಪಟ್ಟಿಯಲ್ಲಿ ತಪ್ಪಾಗಿ ನಮೂದಾಗಿರುವ ಹೆಸರುಗಳನ್ನು, ಇಲ್ಲದ ಮತದಾರರನ್ನು ತೆಗೆದು, ಪರಿಷ್ಕರಿಸುವ ಜೊತೆಗೆ ಸದೃಢ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ, “ಒಬ್ಬ ವ್ಯಕ್ತಿ, ಒಂದು ಮತ”ವನ್ನು ಸಾಕಾರಗೊಳಿಸುವ ಪ್ರಕ್ರಿಯೆ ಕುರಿತು ಸಂಸದ ಬಿ ವೈ ರಾಘವೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.

ಈ ಕಾರ್ಯಾಗಾರದ ಮೂಲಕ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡಿ, ಅಗತ್ಯವಿರುವ ಪ್ರಕ್ರಿಯೆಗಳು ಹಾಗೂ ಸಮರ್ಪಕ ಪರಿಶೀಲನಾ ವಿಧಾನಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಮತದಾರರೊಂದಿಗೆ ಸಂಪರ್ಕವಿಟ್ಟುಕೊಂಡು ಪಾರದರ್ಶಕ ಚುನಾವಣಾ ಪ್ರಕ್ರಿಯೆ ನಿರ್ಮಿಸುವಲ್ಲಿ ಅವರ ಅತ್ಯಮೂಲ್ಯ ಪಾತ್ರದ ಬಗ್ಗೆ ಉಭಯ ಧುರೀಣರು ತಿಳಿಸಿದರು.

ಕಾರ್ಯಾಗಾರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಶಿಕಾರಿಪುರ ಮಂಡಲ ಅಧ್ಯಕ್ಷ ಹನುಮಂತಪ್ಪ, ಶಾಸಕ ಹರೀಶ್ ಪೂಂಜಾ, ಮಾಜಿ ಜಿಲ್ಲಾಧ್ಯಕ್ಷ ಮೇಘರಾಜ್, ಪ್ರಮುಖರಾದ ಕೆ.ಎಸ್.ಗುರುಮೂರ್ತಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಗಾಯತ್ರಿದೇವಿ ಮಲ್ಲಪ್ಪ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಬೂತ್ ಮಟ್ಟದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow Us

Leave a Reply

Your email address will not be published. Required fields are marked *

Back to top button