ಸಿಎಂ ಹುದ್ದೆಗಾಗಿ ಕಾಂಗ್ರೆಸ್‌ನಲ್ಲಿ ಮುಂದುವರೆದ ಗುದ್ದಾಟ|ನವದೆಹಲಿಗೆ ಹಠಾತ್ ತೆರಳಿದ ಬಿ ವೈ ವಿಜಯೇಂದ್ರ|ಸಂತೋಷ್‌ಜೀ, ಡಾ.ರಾಧಾಮೋಹನ್ ಜೊತೆ ಸುದೀರ್ಘ ಚರ್ಚೆ
ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿರುವ ಬಿ ವೈ ವಿಜಯೇಂದ್ರ, ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಅಧಿಕಾರ ಹಂಚಿಕೆಯ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿರುವಾಗಲೇ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ದಿಢೀರ ಆಗಿ ನವದೆಹಲಿ ತೆರಳಿರುವುದು ರಾಜಕೀಯ ವಲಯಗಳಲ್ಲಿ ಕುತೂಹಲ ಮೂಡಿಸುವಂತೇ ಮಾಡಿದೆ.
ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿರುವ ಬಿ ವೈ ವಿಜಯೇಂದ್ರ, ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಬಿ ಎಲ್ ಸಂತೋಷ್‌ಜೀ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್ವಾಲ್ ಅವರನ್ನು ಬಿ ವೈ ವಿಜಯೇಂದ್ರ ಪ್ರತ್ಯೇಕವಾಗಿ ಭೇಟಿಯಾಗಿದ್ದರು.

ಕಾಂಗ್ರೆಸ್ ಪಕ್ಷದಲ್ಲಿ ನಡೆದಿರುವ ಕುರ್ಚಿ ಗುದ್ದಾಟದಿಂದ ಮುಂದೆ ಆಗುವ ಪರಿಣಾಮಗಳ ಕುರಿತು ಹಾಗು ಈ ಸಂದರ್ಭದಲ್ಲಿ ಪಕ್ಷದ ನಡೆ ಹೇಗಿರಬೇಕು ಎಂಬುದರ ಕುರಿತು ಉಭಯ ನಾಯಕರ ಜೊತೆ ಬಿ ವೈ ವಿಜಯೇಂದ್ರ ಮಾತುಕತೆ ನಡೆಸಿದರು ಎಂದು ಬಿಜೆಪಿ ಮೂಲಗಳು ಹೇಳಿವೆ.
ಇದೇ ವೇಳೆ ಪಕ್ಷದ ಸೈದ್ಧಾಂತಿಕತೆ, ವೈಚಾರಿಕ ಸ್ಪಷ್ಟತೆ ಹೊಂದಿರುವ ಸಂತೋಷ್‌ಜೀ ಅವರ ಮಾತುಗಳು ನನ್ನಂತಹ ಲಕ್ಷಾಂತರ ಕಾರ್ಯಕರ್ತರಿಗೆ ಸದಾ ಸ್ಫೂರ್ತಿಯಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ರಾಘವೇಂದ್ರ ಹೇಳಿದರು.
ವಿಜಯೀಂದ್ರ ಹುನಗುಂದ್
ಪ್ರಧಾನ ಸಂಪಾದಕ
ನ್ಯೂಇಂಡಿಯಾ ಕನ್ನಡ
ಬೆಂಗಳೂರು






