DistrictShivamogga

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಸಿಟಿ ರೌಂಡ್ಸ್‌|ಗುರುಪುರ ವೆಂಕಟೇಶ ನಗರಕ್ಕೆ ಭೇಟಿ|ನೀರು ಪೂರೈಕೆ ವ್ಯತ್ಯಯ ಸರಿಪಡಿಸಲು ಖಡಕ್ ಸೂಚನೆ|

ನೀರಿನ ಪೂರೈಕೆ ಸಮರ್ಪಕಗೊಳಿಸಲು ಹಾಗೂ ಸ್ವಚ್ಛತಾ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.

ಶಿವಮೊಗ್ಗ: ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಸೋಮವಾರದಂದು ವಾರ್ಡ್ ನಂಬರ್ 5ರ ಗುರುಪುರ ವೆಂಕಟೇಶ ನಗರಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಕುಡಿಯುವ ನೀರಿನ ಪೂರೈಕೆಯ ವ್ಯತ್ಯಯ ಹಾಗೂ ಚರಂಡಿ ನೈರ್ಮಲ್ಯದ ಸಮಸ್ಯೆಗಳ ಕುರಿತು ಸ್ಥಳೀಯ ನಿವಾಸಿಗಳು ಶಾಸಕರಿಗೆ ಅಹವಾಲು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ , ನೀರಿನ ಪೂರೈಕೆ ಸಮರ್ಪಕಗೊಳಿಸಲು ಹಾಗೂ ಸ್ವಚ್ಛತಾ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.

ಬಿಜೆಪಿ ನಗರಾಧ್ಯಕ್ಷ ಮೋಹನ್ ರೆಡ್ಡಿ, ಪ್ರಮುಖರಾದ ಮಲ್ಲಿಕಾರ್ಜುನ್, ಹರೀಶ್, ಆನಂದ್,ನಿತಿನ್, ಮಾಲತೇಶ್ ಸೇರಿದಂತೆ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button