ಕ್ರಿಕೆಟ್ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಚಾಲನೆ|ಮಾರ್ಚ್ಗೆ ಕಾಮಗಾರಿ ಪೂರ್ಣ-ವೆಂಕಟೇಶ್ ಪ್ರಸಾದ್|ಕ್ರಿಕೆಟ್ “ಹಬ್”ಆಗಲಿ-ಸಂಸದ ರಾಘವೇಂದ್ರ ಆಶಯ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರಿಕೆಟ್ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಸ್ಥೆ ಹಲವು ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಿದೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.

ಶಿವಮೊಗ್ಗ: ಸುಮಾರು 4.90ಕೋಟಿರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಕ್ರಿಕೆಟ್ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಮಂಗಳವಾರದಂದು ಸಂಸದ ಬಿ.ವೈ.ರಾಘವೇಂದ್ರ ಮತ್ತು ಕರ್ನಾಟಕ ರಾಜ್ಯ ಕ್ರಿಕೇಟ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಶಂಕುಸ್ಥಾಪನೆ ನೇರವೇರಿಸಿದರು.

ನವುಲೆಯಲ್ಲಿರುವ ಕರ್ನಾಟಕ ರಾಜ್ಯ ಕ್ರಿಕೇಟ್ ಸಂಸ್ಥೆ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಈ ಒಳಾಂಗಣ ಕ್ರೀಡಾಂಗಣ ನಿರ್ಮಾಣದಿಂದ ಶಿವಮೊಗ್ಗದ ಕ್ರೀಡಾಪಟುಗಳಿಗೆ ಮಳೆಗಾಲದಲ್ಲೂ ಅಭ್ಯಾಸಕ್ಕೆ ಅನುಕೂಲವಾಗಲಿದೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಈ ಸಂದರ್ಭದಲ್ಲಿ ಹೇಳಿದರು.

ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕ್ರಿಕೆಟ್ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಂಸ್ಥೆ ಹಲವು ಮೂಲಸೌಕರ್ಯ ಅಭಿವೃದ್ಧಿಗೆ ಮುಂದಾಗಿದೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದರು.

ಸುಮಾರು ಬರುವ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶವಿದೆ. ಒಳಾಂಗಣ ಸೌಲಭ್ಯದೊಂದಿಗೆ ಜಿಮ್, ಡ್ರೆಸ್ಸಿಂಗ್ ರೂಂ, ಪೆವಿಲಿಯನ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹೇಳಿದರು.
ಕ್ರಿಕೆಟ್ ಹಬ್ ಆಗಲಿ|
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ‘ಅಮೃತ್-2’ ಯೋಜನೆಯಡಿ ಕೆರೆಗಳ ಅಭಿವೃದ್ಧಿಗಾಗಿ ಸುಮಾರು 5 ಕೋಟಿರೂ. ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ಕೆರೆ ಅಭಿವೃದ್ಧಿಯ ಜತೆಗೆ ಕ್ರೀಡಾಂಗಣಕ್ಕೆ ಪ್ರವೇಶ–ನಿರ್ಗಮನ ವ್ಯವಸ್ಥೆ, ಮೂಲಸೌಕರ್ಯ, ಅತ್ಯುತ್ತಮ ಕ್ರಿಕೆಟ್ ಪಿಚ್ ಸೇರಿದಂತೆ ಅಗತ್ಯವಿರುವ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಒಟ್ಟಾಗಿ ಕೈಗೊಳ್ಳಬೇಕು ಎಂದು ಹೇಳಿದರು.

ಬೆಂಗಳೂರಿಗೆ ಸೀಮಿತ ಎಂಬಂತಿರುವ ಕ್ರಿಕೆಟ್ ಆಟವು, ಭವಿಷ್ಯದಲ್ಲಿ ಶಿವಮೊಗ್ಗವೇ “ಕ್ರಿಕೆಟ್ ಹಬ್” ಎನ್ನುವಂತಾಗಬೇಕೆಂದು ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯ ಪಟ್ಟರು.

ಕೆಎಸ್ಸಿಎ ನಿರ್ದೇಶಕ ಡಿ.ಎಸ್. ಅರುಣ್, ಮುಂಬರುವ ದಿನಗಳಲ್ಲಿ ರಾತ್ರಿ ಪಂದ್ಯಾವಳಿ ನಡೆಸಲು ಅನುಕೂಲವಾಗುವಂತೆ ಫ್ಲಡ್ಲೈಟ್ ವ್ಯವಸ್ಥೆ ಕಲ್ಪಿಸಿ ‘ಮಹಾರಾಜ ಟ್ರೋಫಿ’ ಆಯೋಜಿಸುವ ಯೋಜನೆಯಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಮಂಜುನಾಥ್ ಬಂಢಾರಿ, ಎಸ್.ಎನ್.ಚೆನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ಹೆಚ್.ಪಿ
ಬ್ಯುರೋ ಚೀಫ್
ನ್ಯೂಇಂಡಿಯ ಕನ್ನಡ
ಶಿವಮೊಗ್ಗ.






