Bengaluru UrbanKarnatakaNational

ಡಾ.ಅಂಬೇಡ್ಕರ್‌ ಅವರು ಬೌದ್ಧ ಧರ್ಮಕ್ಕೆ ಸೇರಲು ಹಿಂದೂ ಧರ್ಮದ ಸಾಮಾಜಿಕ ವ್ಯವಸ್ಥೆಯೇ ಕಾರಣ|ಸಂವಿಧಾನ ಪ್ರತಿಯೊಬ್ಬರ ಹಕ್ಕು-ಸಿಎಂ ಸಿದ್ದರಾಮಯ್ಯ

ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು.ಡಿ.06, ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ ಗೌರವ ತಂದುಕೊಡಲು ಡಾ.ಅಂಬೇಡ್ಕರ್ ಪ್ರಯತ್ನಿಸಿದರಲ್ಲದೇ, ದೇಶದಲ್ಲಿ ಸಾಮಾಜಿಕ ನ್ಯಾಯ ಸಿಗದವರ ಪರವಾಗಿ ಹೋರಾಟ ಮಾಡಿದ ಮಹಾನ ವ್ಯಕ್ತಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶನಿವಾರದಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಎಂತಹಾ ಸಂವಿಧಾನದ ಅಗತ್ಯವಿದೆ ಎಂದು ಯೋಚಿಸಿ, ಇತರೆ ದೇಶಗಳ ಸಂವಿಧಾನವನ್ನು ಅಭ್ಯಾಸ ಮಾಡಿ, ಅತ್ಯಂತ ಶ್ರೇಷ್ಠ ಸಂವಿಧಾನವನ್ನು ಕೊಟ್ಟಿದ್ದಾರೆ ಎಂದು ಹೇಳಿದರು.

ನಮ್ಮ ಸಾಮಾಜಿಕ ವ್ಯವಸ್ಥೆ ಬದಲಾವಣೆಯಾಗಬೇಕು, ಎಲ್ಲರಿಗೂ ಸಮಾನ ಅವಕಾಶಗಳು ದೊರಕಬೇಕು ಹಾಗೂ ಸಾಮಾಜಿಕ ನ್ಯಾಯ ಸ್ಥಾಪನೆಯಾಗಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶಾಲಾ ಕಾಲೇಜು ಮಕ್ಕಳಿಗೆ ಇದರ ಅರಿವು ಮೂಡಿಸಲು ಸಂವಿಧಾನ ಪೀಠಿಕೆಯನ್ನು ನಿತ್ಯ ಬೋಧಿಸಲಾಗುತ್ತಿದೆ. ಸಂವಿಧಾನವು ಪ್ರತಿಯೊಬ್ಬರಿಗೂ ಹಕ್ಕು ಮತ್ತು ಬಾಧ್ಯತೆಗಳನ್ನು ನೀಡಿದೆ.

ಸಂವಿಧಾನದ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು ಎಂಬ ಕಾರಣದಿಂದ ಸರ್ಕಾರ ಇದನ್ನು ಜಾರಿ ಮಾಡಿದೆ ಎಂದು ಸಿಎಂ ಹೇಳಿದರು.

ಅಂಬೇಡ್ಕರ್ ಅವರ ಪರಿನಿರ್ವಾಣ ದಿನದಂದು ನಾವು ಅವರನ್ನು ಸ್ಮರಿಸುವ ಕೆಲಸವನ್ನು ಮಾಡಿದ್ದೇವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅವರ ಕೊನೆಯ ದಿನಗಳಲ್ಲಿ ಬೌದ್ಧ ಧರ್ಮವನ್ನು ಸ್ವೀಕರಿಸಿದರು.

ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದಿದ್ದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಪಟ್ಟು, ಅದು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೌದ್ಧ ಧರ್ಮ ಸ್ವೀಕರಿಸಿದ್ದೇನೆ ಎಂದೂ ಹೇಳಿದ್ದರು.

ಹಿಂದೂ ಧರ್ಮದಲ್ಲಿರುವ ಸಾಮಾಜಿಕ ವ್ಯವಸ್ಥೆಗೆ ರೋಸಿಹೋಗಿ ಹೀಗೆ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಡಿಸಿಎಂ ಡಿ ಕೆ ಶಿವಕುಮಾರ್‌, ಸಮಾಜ ಕಲ್ಯಾಣ ಸಚಿವ ಹೆಚ್‌ ಸಿ ಮಹದೇವಪ್ಪ, ಸಚಿವ ಜಮೀರ್‌ಅಹ್ಮದ್‌ಖಾನ್‌, ಮಾಜಿ ಸಚಿವ ಹೆಚ್‌ ಆಂಜನೇಯ ಮತ್ತಿತರರು ಉಪಸ್ಥಿತರಿದ್ದರು.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button