DistrictShivamogga
ನ್ಯೂ ಮಂಡ್ಲಿ ಪೇಪರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ|ಬೆಂಕಿಯ ಕೆನ್ನಾಲಿಗೆಯಿಂದ ಪಾರಾದ ಸಿಬ್ಬಂದಿ|ಲಕ್ಷಾಂತರ ರೂ. ಮೌಲ್ಯದ ಸಾಮಗ್ರಿಗಳು ಬೆಂಕಿಗೆ ಅಪೋಶನ
ಬೆಂಕಿ ಅವಘಡ ಸಂಭವಿಸುತ್ತಿದ್ದಂತೇ ಕಾರ್ಖಾನೆಯಲ್ಲಿದ್ದ ಸಿಬ್ಬಂದಿ ಹೊರ ಓಡಿ ಬಂದಿದ್ದಾರೆ. ಇದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಶಿವಮೊಗ್ಗ: ನ್ಯೂ ಮಂಡ್ಲಿ ಪ್ರದೇಶದಲ್ಲಿರುವ ಪೇಪರ್ ಕಾರ್ಖಾನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಬುಧವಾರದಂದು ನಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಪೇಪರ ರೋಲ್‌ಗಳು ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಿವಿಧ ಸಾಮಗ್ರಿಗಳು ಆಹುತಿಯಾಗಿದೆ.
ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗಿದೆ.
ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿ|
ಅಪಾಯದಿಂದ ಪಾರಾದ ಸಿಬ್ಬಂದಿ|
ಪೇಪರ್ ಕಾರ್ಖಾನೆಗೆ ಬೆಂಕಿ ಬೀಳಲು ಕಾರಣವೇನು ಎಂಬುದರ ಬಗ್ಗೆ ಇನ್ನು ನಿಖರವಾಗಿ ತಿಳಿದುಬಂದಿಲ್ಲ. ಈ ಬಗ್ಗೆ ತನಿಖೆ ಮಾಡಲಾಗುತ್ತಿದೆ.
ಅವಘಡ ಸಂಭವಿಸುತ್ತಿದ್ದಂತೇ ಕಾರ್ಖಾನೆಯಲ್ಲಿದ್ದ ಸಿಬ್ಬಂದಿ ಹೊರ ಓಡಿ ಬಂದಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಇನ್ನು ಬೆಂಕಿ ಅವಘಡದಲ್ಲಿ ಉಂಟಾಗಿರುವ ನಷ್ಟದ ಪ್ರಮಾಣದ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಮೂಡಿತ್ತು.
ವರದಿ: ನ್ಯೂಸ್ ಡೆಸ್ಕ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







