DistrictKarnatakaShivamogga

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ವರ್ಗಾವಣೆ|ಶಿವಮೊಗ್ಗ ಲೆಕ್ಕಪರಿಶೋಧನಾಧಿಕಾರಿಯಾಗಿ ಅಧಿಕಾರ ಸ್ವೀಕಾರ|ವಿವಿಧ ಇಲಾಖೆಗಳ ನೌಕರರ ಉಪಸ್ಥಿತಿ

ಈ ಹಿಂದೆ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎಸ್.ಷಡಾಕ್ಷರಿ , 2023ರಲ್ಲಿ ಶಿವಮೊಗ್ಗದಿಂದ ವರ್ಗಾವಣೆಗೊಂಡು ಕೋಲಾರ, ಬೆಂಗಳೂರಿನ ಉಚ್ಛನ್ಯಾಯಾಲಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಶಿವಮೊಗ್ಗ: ಇಲ್ಲಿಯ ಲೆಕ್ಕಪರಿಶೋಧನಾ ವರ್ತುಲ ಇಲಾಖೆಯಲ್ಲಿ ಲೆಕ್ಕಪರಿಶೋಧನಾಧಿಕಾರಿಯಾಗಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಜೂನ್18ರಂದು ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಲೆಕ್ಕ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎಸ್.ಷಡಾಕ್ಷರಿ , 2023ರಲ್ಲಿ ಶಿವಮೊಗ್ಗದಿಂದ ವರ್ಗಾವಣೆಗೊಂಡು ಕೋಲಾರ, ಬೆಂಗಳೂರಿನ ಉಚ್ಛನ್ಯಾಯಾಲಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಈಗ ಮತ್ತೆ ಶಿವಮೊಗ್ಗಕ್ಕೆ ಮರಳಿ ಕರ್ತವ್ಯದ ಮೇಲೆ ಹಾಜರಾಗಿರುವುದು ರಾಜ್ಯ ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ. ಸಿ.ಎಸ್.ಷಡಾಕ್ಷರಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button