EducationKarnataka

ಹೈಕೋರ್ಟ್‌ ಅಂಗಳಕ್ಕೆ ಬಂದ “ತೃತೀಯ ಭಾಷೆ” ಗ್ರೇಡಿಂಗ್‌ ತೀರ್ಮಾನ| ರದ್ದು ಕೋರಿ ಪಿಐಎಲ್‌ ಸಲ್ಲಿಕೆ|ಮಧು ಬಂಗಾರಪ್ಪ ಸೇರಿ ಮೂವರು ಪ್ರತಿವಾದಿಗಳು

ತೃತೀಯ ಭಾಷೆಗಳಿಗೆ ಅಂಕಗಳು ಕಡ್ಡಾಯವಲ್ಲ ಬದಲಿಗೆ ಗ್ರೇಡ್‌ಗಳನ್ನು ಪರಿಗಣಿಸಲಾಗುತ್ತದೆ ಎಂದು ಇತ್ತೀಚೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ದಿಢೀರ ಘೋಷಣೆ ಮಾಡಿದ್ದನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಆಕ್ಷೇಪಣೆ ಎತ್ತಲಾಗಿದೆ.

ಬೆಂಗಳೂರು: ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೇ ತೃತೀಯ ಭಾಷೆಗಳಿಗೆ ಗ್ರೇಡ್ ನೀಡಲು ಮುಂದಾಗಿದ್ದ ರಾಜ್ಯ ಸರ್ಕಾರದ ತೀರ್ಮಾನದ ವಿರುದ್ದ ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಹೈಕೋರ್ಟ್‌ನಲ್ಲಿ ಪಿಐಎಲ್‌ ಸಲ್ಲಿಕೆ ಮಾಡಿರುವ ಬೆಂಗಳೂರಿನ ಹೆಚ್.ಎನ್‌.ಚಂದನಾ, ಮತ್ತು ಎಸ್‌.ವೆಂಕಟೇಶ್‌ ಅವರುಗಳು ತೃತೀಯ ವಿಷಯಗಳಿಗೆ ಗ್ರೇಡಿಂಗ್‌ ಪದ್ದತಿ ಜಾರಿಗೆ ತರುವದರಿಂದ ಆಗುವ ಪರಿಣಾಮಗಳನ್ನು ಎಳೆಎಳೆಯಾಗಿ ವಿವರಿಸಿದ್ದಾರೆ.

ಸರ್ಕಾರದ ದಿಢೀರ ನಿರ್ಧಾರವು ಪರಿಚ್ಛೇದ 21A ಶಿಕ್ಷಣ ಹಕ್ಕಿನ ಮೇಲೆ ಪರಿಣಾಮ ಬೀರುವದಲ್ಲದೇ ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯವನ್ನು ಅಸ್ಥಿರಗೊಳಿಸಲಿದೆ. ಅಲ್ಲದೇ ಪರಿಚ್ಛೇದ 14ರಡಿ ಸಮಾನತೆ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದ್ದಾರೆ.

ತೃತೀಯ ಭಾಷೆಗಳಿಗೆ ಅಂಕಗಳು ಕಡ್ಡಾಯವಲ್ಲ ಬದಲಿಗೆ ಗ್ರೇಡ್‌ಗಳನ್ನು ಪರಿಗಣಿಸಲಾಗುತ್ತದೆ ಎಂದು ಇತ್ತೀಚೆಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ದಿಢೀರ ಘೋಷಣೆ ಮಾಡಿದ್ದನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಆಕ್ಷೇಪಣೆ ಎತ್ತಲಾಗಿದೆ.

ಹೀಗೆ ತರಾತುರಿ ನಿರ್ಧಾರ ಮಾಡುವ ಮುನ್ನ ಸಾರ್ವಜನಿಕವಾಗಿ ಚರ್ಚೆ ಮಾಡದೇ ಇರುವದು, ಸಚಿವ ಸಂಪುಟದ ಅನುಮೋದನೆ ಪಡೆಯದೇ ಇರುವದು ಹಾಗೂ ಭಾಷಾ ತಜ್ಞರ ಸಲಹೆ ಪಡೆಯದೇ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿರುವದನ್ನು ಅರ್ಜಿಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ದಿಢೀರ ನಿರ್ಧಾರದಿಂದ ಶಿಕ್ಷಣ ವ್ಯವಸ್ಥೆ ಮೇಲೆ ಪರಿಣಾಮ ಬೀರುವದರಿಂದ ತೃತೀಯ ಭಾಷೆಗಳಿಗೆ ಗ್ರೇಡಿಂಗ್‌ ಪದ್ದತಿಯನ್ನು ಜಾರಿಗೆ ತರಲು ಹೊರಟಿರುವದರಿಂದ ಈ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಲಾಗಿದ್ದು, ನ್ಯಾಯಾಲಯವು ಈ ಕುರಿತು ಮಧ್ಯಪ್ರವೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button