EducationKarnatakaShivamogga
15 ಸಾವಿರ ಸರ್ಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್|ಸಂಜೆಯಿಂದಲೇ ಆನ್ಲೈನ್ನಲ್ಲಿ ಅರ್ಜಿ|ಕೊಟ್ಟ ಮಾತನ್ನು ಉಳಿಸಿಕೊಂಡ ಸಚಿವ ಮಧು ಬಂಗಾರಪ್ಪ
ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮೊದಲೇ ಅರ್ಜಿ ಸಲ್ಲಿಸಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.

ಬೆಂಗಳೂರು/ಶಿವಮೊಗ್ಗ: ಶಿಕ್ಷಕರಾಗಬೇಕೆಂದು ಜಾತಕಪಕ್ಷಿಯಂತೇ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳಿಗೆ ಕೊನೆಗೂ ಸರ್ಕಾರ ಸಿಹಿ ಸುದ್ದಿ ನೀಡಿದೆ.
15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಮಂಗಳವಾರ ಸಂಜೆ 06 ಗಂಟೆಯಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 07 ಕೊನೆಯ ದಿನವಾಗಿದೆ.

ಈಗಾಗಲೇ ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ನೇಮಕಕ್ಕೆ ಶೈಕ್ಷಣಿಕ ಜಿಲ್ಲಾವಾರು ಪ್ರತ್ಯೇಕ ಅಧಿಸೂಚನೆ ಹೊರಡಿಸಿದೆ.
ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಮೊದಲೇ ಅರ್ಜಿ ಸಲ್ಲಿಸಿ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಒಟ್ಟಿಗೆ ಅರ್ಜಿ ಸಲ್ಲಿಸಲು ಮುಂದಾದರೆ ಸರ್ವರ್ ಡೌನ್ ಆಗಿ ಸಮಸ್ಯೆ ಉಂಟಾಗಬಹುದು ಎಂದು ಹೇಳಿದ್ದಾರೆ.
- ಪ್ರಾಥಮಿಕ ಶಾಲೆಯ 900 ಶಿಕ್ಷಕರು
- 150 ದೈಹಿಕ ಶಿಕ್ಷಕರು ಸೇರಿದಂತೆ ಒಟ್ಟು 1,050 ಶಿಕ್ಷಕರು
- ಕಂಪ್ಯೂಟರ್ ಸೇರಿದಂತೆ ವಿವಿಧ ವಿಷಯಗಳ ಒಟ್ಟು 9,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು,
- ಹಾಗೂ ಪ್ರೌಢ ಶಾಲೆಗಳಲ್ಲಿನ 4,950 ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಕರು ಸೇರಿ
- ಒಟ್ಟು 15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ.
- ನೇಮಕ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ಯಾವುದೇ ಗೊಂದಲವಿಲ್ಲದಂತೆ ನಡೆಸಲು ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







