DistrictShivamogga

Shivmogga: ದೇಶದ ಅಭಿವೃದ್ದಿಯಲ್ಲಿ ಯುವಜನತೆಯ ಪಾತ್ರ ಮಹತ್ತರ|ಸ್ವಾಮಿ ವಿವೇಕಾನಂದರ ಆಶಯಗಳಿಗೆ ಬಲ ತುಂಬಬೇಕು|ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಮತ

ದೇಶದ ಅಭಿವೃದ್ದಿಯಲ್ಲಿ ಯುವಜನತೆಯ ಪಾತ್ರ ಮಹತ್ತರವಾಗಿದೆ ಎಂದು ಹೇಳಿದ್ದ ವಿವೇಕಾನಂದ ಅವರ ಚಿಂತನೆಗಳು, ಜೀವನ ಮೌಲ್ಯ ಯುವಕರಿಗೆ ಪ್ರೇರಣೆಯಾಗಿದ್ದು, ನಾವು ಯುವಜನತೆಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ಶಿವಮೊಗ್ಗ: ತಮ್ಮ ಜೀವನವನ್ನೇ ದೇಶಕ್ಕಾಗಿ ಸಮರ್ಪಿಸಿಕೊಂಡಿದ್ದ ಸ್ವಾಮಿ ವಿವೇಕಾನಂದರು, ಚಿಕ್ಕ ವಯಸ್ಸಿನಲ್ಲಿಯೇ ಅವರೊಂದು ವಿಶ್ವವಿದ್ಯಾಲಯವಾಗಿದ್ದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ ಕುವೆಂಪು ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನ ಹಾಗೂ ಯುವ ಸಪ್ತಾಹ ಅಂಗವಾಗಿ ಏರ್ಪಡಿಸಲಾಗಿದ್ದ ಯುವಜನತೆಗೆ ಐಎಎಸ್ ಮತ್ತು ಐಪಿಎಸ್ ಕಾರ್ಯಾಗಾರ ಹಾಗೂ ಮಾದಕ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಭಕ್ತಿ, ಪ್ರಾಮಾಣಿಕತೆ ಮತ್ತು ನಂಬಿಕೆಯ ಪ್ರತೀಕರಾಗಿದ್ದ ಸ್ವಾಮಿ ವಿವೇಕಾನಂದರು, ನಂಬಿಕೆ ಎಷ್ಟು ಮುಖ್ಯ ಎಂಬುದನ್ನು ರಾಮಕೃಷ್ಣ ಪರಮಹಂಸ ಮತ್ತು ವಿವೇಕಾನಂದ ಗುರು ಶಿಷ್ಯರ ಮಾತಿನಲ್ಲಿ ಕಾಣುತ್ತದೆ ಎಂದು ಅವರು ತಿಳಿಸಿದ್ದಾರೆ.

ದೇಶದ ಅಭಿವೃದ್ದಿಯಲ್ಲಿ ಯುವಜನತೆಯ ಪಾತ್ರ ಮಹತ್ತರವಾಗಿದೆ ಎಂದು ಹೇಳಿದ್ದ ವಿವೇಕಾನಂದ ಅವರ ಚಿಂತನೆಗಳು, ಜೀವನ ಮೌಲ್ಯ ಯುವಕರಿಗೆ ಪ್ರೇರಣೆಯಾಗಿದ್ದು, ನಾವು ಯುವಜನತೆಗೆ ಹೆಚ್ಚಿನ ಶಕ್ತಿಯನ್ನು ತುಂಬಬೇಕಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ಶಾಸಕಿ ಬಲ್ಕೀಶ್ ಬಾನು ಮಾತನಾಡಿ, ಸ್ವಾಮಿ ವಿವೇಕಾನಂದರವರು ಈ ದೇಶದ ಮಹಾನ್ ಯುವಕ, ಸಂತ. ಅಮೇರಿಕಾ ದೇಶದ ಚಿಕಾಗೋದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇವರಿಗೆ ಸಮರ್ಪಕ ಗೌರವ ದೊರಕದಿದ್ದರೂ, ತಮ್ಮ ಭಾಷಣದಲ್ಲಿ ದೃಢವಾಗಿ ಹಿಂದೂ ಧರ್ಮ, ಸಂಸ್ಕೃತಿಯ ಬಗ್ಗೆ ಸ್ಪಷ್ಟವಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಯುವಜನತೆ ಸೇರಿದಂತೆ ನಮಗೆಲ್ಲರಿಗೂ ಯಾವುದೇ ಕ್ಷೇತ್ರವಿರಲಿ, ಏನೇ ಕೆಲಸ ಮಾಡುತ್ತಿರಲಿ ಜೀವನೋತ್ಸಾಹ ಬಹಳ ಮುಖ್ಯವಾಗಿ ಬೇಕು. ಯಾವುದೇ ಕೆಲಸದಲ್ಲಿ ಮನಸಾರೆ ತೊಡಗಿಕೊಂಡಲ್ಲಿ ಯಶಸ್ಸು ಹೆಚ್ಚಿರುತ್ತದೆ ಎಂದರು. ನಾವು ನಮ್ಮ ಆಲಸ್ಯದ ಬಡತನದಿಂದ ಹೊರಬರಬೇಕು ಎಂದು ತಿಳಿಸಿದರು.

ಐಎಎಸ್ ಪ್ರೊಬೇಷನರಿ ಅಧಿಕಾರಿ ನಾಗೇಂದ್ರ ಕುಮಾರ್ ಬಾಬು, ಪಿಪಿಟಿ ಪ್ರದರ್ಶನ ಮೂಲಕ ಐಎಎಸ್ ಪರೀಕ್ಷೆಗೆ ತಯಾರಿ, ಪರೀಕ್ಷೆ, ಸಂದರ್ಶನ ಮತ್ತು ಆಯ್ಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಿಗೆ ಸವಿವರವಾದ ಮಾಹಿತಿ ನೀಡಿದರು.

ಐಪಿಎಸ್ ಪ್ರೊಬೇಷನರಿ ಅಧಿಕಾರಿ ಮೇಘಾ ಅಗರ್ವಾಲ್, ಐಪಿಎಸ್ ಪರೀಕ್ಷೆಗೆ ತಯಾರಿ, ಪರೀಕ್ಷೆ, ಸಂದರ್ಶನ, ಆಯ್ಕೆ ಪ್ರಕ್ರಿಯೆ ಕುರುತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸೈಬರ್ ಕ್ರೈಮ್ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ ಮಾದಕ ವಸ್ತುಗಳ ದುಷ್ಪರಿಣಾಮಗಳು, ಎನ್‌ಡಿಪಿಎಸ್ ಕಾಯ್ದೆ, ಮಾದಕ ವಸ್ತುಗಳಿಂದ ದೂರು ಇರುವ ಬಗೆ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಇದೇ ವೇಳೆ ಯುವ ಸಪ್ತಾಹದ ಅಂಗವಾಗಿ ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲಾಗಿದ್ದ ಕ್ರೀಡೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ,ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಶೋಭಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Follow Us

Leave a Reply

Your email address will not be published. Required fields are marked *

Back to top button