ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶಾಸಕ ಚನ್ನಬಸಪ್ಪ ಭೇಟಿ|ಮೂಲಭೂತ ಸೌಕರ್ಯಗಳ ಸುಧಾರಣೆಗೆ ಒತ್ತು ನೀಡಲು ಅಧಿಕಾರಿಗಳಿಗೆ ಸೂಚನೆ
ದೇವಾಲಯದ ಸೌಂದರ್ಯೀಕರಣ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಎಸ್ಎನ್ ಚನ್ನಬಸಪ್ಪ ಚರ್ಚೆ ನಡೆಸಿದರು.

ಐತಿಹಾಸಿಕ ದೂರ್ವಾಸ ಕ್ಷೇತ್ರ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಗುರುವಾರ ಬೆಳಗ್ಗೆ ಶಾಸಕ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು.
ದೇವಸ್ಥಾನದ ಸಮಗ್ರ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಶಾಸಕ ಎಸ್ಎನ್ ಚನ್ನಬಸಪ್ಪ ಸಮಾಲೋಚನೆ ನಡೆಸಿದರು.
ದೇವಾಲಯದ ಸೌಂದರ್ಯೀಕರಣ, ಮೂಲಭೂತ ಸೌಕರ್ಯಗಳ ಸುಧಾರಣೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಹತ್ವದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಶಾಸಕ ಎಸ್ಎನ್ ಚನ್ನಬಸಪ್ಪ ಚರ್ಚೆ ನಡೆಸಿದರು.
ದೇವಸ್ಥಾನದ ಪ್ರಾಂಗಣದಲ್ಲಿ ಸಂಚರಿಸಿದ ಶಾಸಕ ಚನ್ನಬಸಪ್ಪ, ಅವಶ್ಯಕ ಸೌಕರ್ಯಗಳನ್ನು ಒದಗಿಸಲು ತುರ್ತು ಕ್ರಮಕ್ಕೆ ಮುಂದಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ದೀನ್ ದಯಾಳ್, ಪ್ರಮುಖರಾದ ಪ್ರಭಾಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾಲಚಂದ್ರ, ಅರ್ಚಕ ರಾಮ್ ಪ್ರಸಾದ್ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ವರದಿ : ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.

Advertisement