ಸಿಇಟಿ ಪರೀಕ್ಷೆ ವೇಳೆ ಜನಿವಾರ ಕಟ್ ಪ್ರಕರಣ|ಧಾರ್ಮಿಕ ಆಚರಣೆ ಅವಮಾನಿಸುವುದು ಖಂಡನಾರ್ಹ|ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮ-ಮಧು ಬಂಗಾರಪ್ಪ
ಸರ್ಕಾರ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಮಕ್ಕಳನ್ನು ಆಕರ್ಷಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ರಿಕೆಗಳಿಗೆ ಜಾಹೀರಾತು ನೀಡಲಿದ್ದೇವೆ ಎಂದು ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸಿಇಟಿ ಪರೀಕ್ಷೆ ಸಂದರ್ಭದಲ್ಲಿ ಹಿಜಾಬ್ ಆಗಲಿ ಜನಿವಾರವಾಗಲೀ ಯಾವುದೇ ಧಾರ್ಮಿಕ ಆಚರಣೆಯನ್ನ ಅವಮಾನಿಸುವುದು ಖಂಡನಾರ್ಹ ಎಂದು ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವದು ಎಂದು ಅವರು ಇದನ್ನು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸೋಮವಾರದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೊಬ್ಬರ ಧಾರ್ಮಿಕ ಆಚರಣೆಗೆ ಧಕ್ಕೆ ತರುವುದು ಸರಿಯಲ್ಲ ಎಂದರು.
ಸರ್ಕಾರ ಶಾಲೆಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ ಮಕ್ಕಳನ್ನು ಆಕರ್ಷಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ರಿಕೆಗಳಿಗೆ ಜಾಹೀರಾತು ನೀಡಲಿದ್ದೇವೆ ಎಂದು ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಕನ್ನಡ ಓದುವ ಕೌಶಲ್ಯ ಪ್ರಗತಿ ಸಾಧಿಸಲು ಪ್ರತಿದಿನ ವೃತ್ತಪತ್ರಿಕೆಗಳ ಸುದ್ದಿಗಳನ್ನ ಓದಿಸುವ ರೂಢಿ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ವಿ ಅಭಿಶೇಕ್ ,ಶಾಸಕಿ ಬಲ್ಕಿಶ್ ಬಾನು, ಮಾಜಿ ಶಾಸಕ ಆಯನೂರು ಮಂಜುನಾಥ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ , ಮುಖಂಡ ಚಂದ್ರಭೂಪಾಲ್ , ರಮೇಶ್ ಶೆಟ್ಟಿ,ಕಲಗೋಡು ರತ್ನಾಕರ್, ಅಬ್ದುಲ್ ವಹೀದ್ ಅಡ್ಡು ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.







