ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆ|ಬ್ರಿಜೇಶ್ ಪಟೇಲ್ ತಂಡಕ್ಕೆ ಗೆಲುವಿನ ವಿಶ್ವಾಸ|ಕ್ರಿಕೆಟ್ ಅಭಿವೃದ್ದಿಗೆ ಶ್ರಮಿಸುತ್ತೇನೆ-ಕೆ ಎನ್ ಶಾಂತಕುಮಾರ್
ತಮ್ಮ ತಂಡವು ಗೆಲುವು ಸಾಧಿಸಿದ್ದಲ್ಲಿ ಕ್ರಿಕೆಟ್‌ಗೆ ಬೇಕಾಗುವ ಮೂಲಸೌಕರ್ಯ, ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುವದಾಗಿ ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ಭರವಸೆ ನೀಡಿದರು.

ಡಿ.7 ರಂದು ನಡೆಯಲಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪದಾಧಿಕಾರಿಗಳ ಚುನಾವಣೆಗೆ ಬಿರುಸಿನ ಸ್ಪರ್ಧೆ ಏರ್ಪಟ್ಟಿದೆ.
ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಅವರ ತಂಡದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿದ್ದಾರೆ.

ಬುಧವಾರ ಸಂಜೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ್ದ ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ಹಾಗು ಮಾಜಿ ಕ್ರಿಕೆಟಿಗ ಬ್ರಿಜೇಶ್ ಪಟೇಲ್ ಜಂಟಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಬ್ರಿಜೇಶ್ ಪಟೇಲ್ ನೇತೃತ್ವದಲ್ಲಿನ ತಂಡವು ರಾಜ್ಯ ಹಾಗೂ ವಲಯಗಳಲ್ಲಿ ಡಿ.7 ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ತಮ್ಮ ತಂಡವು ಗೆಲುವು ಸಾಧಿಸಿದ್ದಲ್ಲಿ ಕ್ರಿಕೆಟ್‌ಗೆ ಬೇಕಾಗುವ ಮೂಲಸೌಕರ್ಯ, ಅಭಿವೃದ್ಧಿ ಸೇರಿದಂತೆ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುವದಾಗಿ ಪತ್ರಿಕೋದ್ಯಮಿ ಕೆ ಎನ್ ಶಾಂತಕುಮಾರ್ ಭರವಸೆ ನೀಡಿದರು.
ಬ್ರಿಜೇಶ್ ಪಟೇಲ್ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ದಿಗೆ ಶ್ರಮಿಸುವದಾಗಿ ಕೆ ಎನ್ ಶಾಂತಕುಮಾರ್ ತಿಳಿಸಿದರು.

ಮಾಜಿ ಕ್ರಿಕೆಟಿಗ್ ಬ್ರಿಜೇಶ್ ಪಟೇಲ್ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ಕೆ ಎನ್ ಶಾಂತಕುಮಾರ್ ಅವರನ್ನು ಬೆಂಬಲಿಸುವಂತೇ ಕೋರಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್ ಆಟ ಮರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ವಲಯ ಅಭ್ಯರ್ಥಿ ಹಾಗು ಶಾಸಕ ಡಿ ಎಸ್ ಅರುಣ್, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ವಿನೋದ್ ಶಿವಪ್ಪ, ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿರುವ ಈ ಎಸ್ ಜೈರಾಮ್, ಮತ್ತಿತರರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ.

Advertisement







