DistrictShivamogga

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ|ಡಿ.20ರಂದು ಪತ್ರಿಕಾ ಭವನದಲ್ಲಿ ಸಮಾರಂಭ|ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಭಾಗಿ

ಶಿವಮೊಗ್ಗ ಜಿಲ್ಲಾ ಘಟಕವು 1953 ರಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಾ ಬಂದಿದೆ. ಸರ್ಕಾರದ ಯೋಜನೆಗಳನ್ನ ಎಲ್ಲ ಪತ್ರಕರ್ತರಿಗೂ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನಿಯೋಜಿತ ಅಧ್ಯಕ್ಷ ವೈದ್ಯನಾಥನ್ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಡಿ.20 ಶನಿವಾರದಂದು ಪತ್ರಿಕಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಹೆಚ್ ಯು ವೈದ್ಯನಾಥನ್ ತಿಳಿಸಿದರು.

ಬುಧವಾರದಂದು ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಿಕಟ ಪೂರ್ವ ಅಧ್ಯಕ್ಷ ಕೆವಿ ಶಿವಕುಮಾರ್ ನೇತೃತ್ವದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಟಿವಿ ಶಿವಾನಂದ ತಗಡೂರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲಾ ಘಟಕವು 1953 ರಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಾ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಾ ಬಂದಿದೆ. ಸರ್ಕಾರದ ಯೋಜನೆಗಳನ್ನ ಎಲ್ಲ ಪತ್ರಕರ್ತರಿಗೂ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದು ನಿಯೋಜಿತ ಅಧ್ಯಕ್ಷ ವೈದ್ಯನಾಥನ್ ತಿಳಿಸಿದರು.

2025 ಮತ್ತು 2028 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಬೆಂಗಳೂರು ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿಬಿ ಲೋಕೇಶ್ ಪ್ರಮಾಣವಚನ ಭೋದಿಸಲಿದ್ದಾರೆ.

ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ಕಳೆದ 6 ವರ್ಷದಿಂದ ನಿಯಮಾನುಸಾರ ಸಂಘವನ್ನ ಮುನ್ನಡೆಸಿಕೊಂಡು ಹೋಗಿದ್ದೇವೆ. ಈಗ ಉತ್ಸಾಹಿ ತಂಡ ನೇಮಕವಾಗಿದೆ.

ವಿಭಿನ್ನ ಆಲೋಚನೆಗಳೊಂದಿಗೆ ಮತ್ತಷ್ಟು ಉತ್ತಮವಾಗಿ ಹೊಸ ಪದಾಧಿಕಾರಿಗಳು ಜಿಲ್ಲಾ‌ ಪತ್ರಕರ್ತರ ಸಂಘವನ್ನು ಮುನ್ನಡೆಸಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ನಿಯೋಜಿತ ಪ್ರಧಾನ ಕಾರ್ಯದರ್ಶಿ ಆರ್ ಎಸ್ ಹಾಲಸ್ವಾಮಿ, ಉಪಾಧ್ಯಕ್ಷ ಹುಚ್ಚರಾಯಪ್ಪ , ಕೆ ಸತ್ಯನಾರಾಯಣ ದೇಶಾದ್ರಿ ಹೊಸಮನೆ , ಎನ್ ರವಿಕುಮಾರ್, ಸಂಘಟನಾ ಕಾರ್ಯದರ್ಶಿ ಗಾರಾ ಶ್ರೀನಿವಾಸ್, ರಾಘವೇಂದ್ರ ಶೆಟ್ಟಿ ಸೇರಿದಂತೆ ನಾಮನಿರ್ದೇಶಿತ ಸದಸ್ಯರು, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು ತಾಲ್ಲೂಕು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆರ್ ಮಾರುತಿ ಭಾಗವಹಿಸಲಿದ್ದು, ರಾಜ್ಯ ಘಟಕದ ಉಪಾಧ್ಯಕ್ಷ ಹೆಚ್ ಬಿ ಮದನ ಗೌಡರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಿರ್ಗಮಿತ ಪ್ರಧಾನ ಕಾರ್ಯದರ್ಶಿ ವಿ.ಟಿ.ಅರುಣ್ , ನಿಯೋಜಿತ ಪ್ರಧಾನ ಕಾರ್ಯದರ್ಶಿ ಆರ್ ಟಿ ಹಾಲಸ್ವಾಮಿ , ಹುಚ್ಚರಾಯಪ್ಪ ಉಪಸ್ಥಿತರಿದ್ದರು.

Follow Us

Leave a Reply

Your email address will not be published. Required fields are marked *

Back to top button