CrimeDistrictShivamogga
Shivmogga: ಸರ್ಕಾರಿ ಹಾಸ್ಟೆಲ್ನಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ-ಯುವತಿಯ ಸಾವಿನ ಸುತ್ತ ಅನುಮಾನದ ಹುತ್ತ..
ಹಾಸ್ಟೆಲ್ನ ಮಹಡಿಯಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಹಾಸ್ಟೆಲ್ನ ಮಹಡಿ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೋಟೆ ರಸ್ತೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ.
ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಮೃತ ವಿದ್ಯಾರ್ಥಿಯನ್ನು ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಎಂದು ಗುರುತಿಸಲಾಗಿದೆ.

ಹಾಸ್ಟೆಲ್ನ ಮಹಡಿಯಲ್ಲಿರುವ ನೀರಿನ ಟ್ಯಾಂಕ್ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಮಹಡಿ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿದ ಕೂಡಲೇ ಹಾಸ್ಟೆಲ್ ವಾರ್ಡನ್ಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಮೃತ ವಿದ್ಯಾರ್ಥಿನಿ ವನಿಷಾ, ಡಿವಿಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎಸ್ಸಿ ಪದವಿ ಓದುತ್ತಿದ್ದಳು. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.



