DistrictShivamogga

ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶಾಸಕ ಚೆನ್ನಬಸಪ್ಪ ಭೇಟಿ, ಸಮಾಲೋಚನೆ|ನೂತನ ಖಾಸಗಿ ಕಾಲೇಜುಗಳ ಸ್ಥಾಪನೆಗೆ ಅನುಮತಿ ನೀಡದಂತೆ ವಿದ್ಯಾರ್ಥಿಗಳ ಮನವಿ|

ವಿದ್ಯಾರ್ಥಿಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಲಾಗುವುದೆಂದು ಶಾಸಕ ಚೆನ್ನಬಸಪ್ಪ ಭರವಸೆ ನೀಡಿದರು.

ಶಿವಮೊಗ್ಗ: ರಾಜ್ಯದಲ್ಲಿ ಪಶು ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಉದ್ಯೋಗದ ಭವಿಷ್ಯಕ್ಕೆ ಮಾರಕವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.

ನಗರದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

ರಾಜ್ಯದಲ್ಲಿ ಹೊಸದಾಗಿ ಖಾಸಗಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಸ್ಥಾಪನೆಗೆ ಅನುಮೋದನೆ ನೀಡುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಆತಂಕ ವ್ಯಕ್ತ ಪಡಿಸಿದರು.

ಅನಿಯಂತ್ರಿತವಾಗಿ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವುದರಿಂದ ಈ ಉನ್ನತ ಶಿಕ್ಷಣದ ಮೂಲಸೌಕರ್ಯ ಹಾಗೂ ಗುಣಮಟ್ಟದ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಇದು ಭವಿಷ್ಯದಲ್ಲಿ ಯುವ ಪಶು ವೈದ್ಯರ ಉದ್ಯೋಗಾವಕಾಶಗಳನ್ನು ಕುಂಠಿತಗೊಳಿಸುವುದಲ್ಲದೆ, ಅಸ್ತಿತ್ವದಲ್ಲಿರುವ ಸರ್ಕಾರಿ ಪಶು ವೈದ್ಯಕೀಯ ಮಹಾವಿದ್ಯಾಲಯಗಳ ಪ್ರಾಮುಖ್ಯತೆಯನ್ನೂ ಕಡಿಮೆ ಮಾಡುತ್ತದೆ ಎಂದು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಲಾಗುವುದೆಂದು ಶಾಸಕ ಚೆನ್ನಬಸಪ್ಪ ಭರವಸೆ ನೀಡಿದರು.

Follow Us

Leave a Reply

Your email address will not be published. Required fields are marked *

Back to top button