DistrictShivamogga

ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳ ವಿಚಾರಣೆ|ದೂರುದಾರರು ಬೆಂಗಳೂರಿಗೆ ಬರುವ ಅವಶ್ಯಕತೆಯಿಲ್ಲ| ಆಯಾ ಜಿಲ್ಲೆಗಳಲ್ಲಿಯೇ ನಡೆಯಲಿದೆ ವಿಲೇವಾರಿ–ಟಿ.ಶ್ಯಾಮ್ ಭಟ್

ಮಾನವ ಹಕ್ಕುಗಳ ವ್ಯಾಪ್ತಿ ಅತಿ ವಿಸ್ತಾರವಾಗಿರುವುದರಿಂದ ದೂರುಗಳ ಸಂಖ್ಯೆ ಸಹ ಹೆಚ್ಚಿದೆ. ಆದ್ದರಿಂದ ಜಿಲ್ಲೆಗಳಿಂದ ವಾಸ್ತವಿಕ ವರದಿಗಳನ್ನು ಬೇಗ ಕಳುಹಿಸಿದರೆ ಶೀಘ್ರ ವಿಲೇವಾರಿ ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅಭಿಪ್ರಾಯಪಟ್ಟರು.

ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಇನ್ನು ಮುಂದೆ ಜಿಲ್ಲಾ ಕೇಂದ್ರಗಳಲ್ಲಿಯೇ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಕರಣ ವಿಲೇವಾರಿ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ದೂರುಗಳ ವಿಚಾರಣೆ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಈಗಾಗಲೇ 24 ಜಿಲ್ಲೆಗಳಲ್ಲಿ ವಿಚಾರಣೆ ನಡೆಸಿದ್ದು ಇನ್ನು 8 ಜಿಲ್ಲೆಗಳು ಬಾಕಿ ಇದೆ ಎಂದರು.

ಮಾನವ ಹಕ್ಕುಗಳ ವ್ಯಾಪ್ತಿ ಅತಿ ವಿಸ್ತಾರವಾಗಿರುವುದರಿಂದ ದೂರುಗಳ ಸಂಖ್ಯೆ ಸಹ ಹೆಚ್ಚಿದೆ. ಆದ್ದರಿಂದ ಜಿಲ್ಲೆಗಳಿಂದ ವಾಸ್ತವಿಕ ವರದಿಗಳನ್ನು ಬೇಗ ಕಳುಹಿಸಿದರೆ ಶೀಘ್ರ ವಿಲೇವಾರಿ ಸಾಧ್ಯವಾಗುತ್ತದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ.ಶ್ಯಾಮ್ ಭಟ್ ಅಭಿಪ್ರಾಯಪಟ್ಟರು.

ಮೆಗ್ಗಾನ್ ಆಸ್ಪತ್ರೆ ಭೇಟಿ ಸಮಯದಲ್ಲಿ ರೋಗಿ ಜೊತೆ ಇರುವ ಸಹಾಯಕರಿಗೆ ರಾತ್ರಿ ತಂಗಲು ಡಾರ್ಮಿಟರಿ ಅವಶ್ಯವಿದೆ ಎಂದು ಸಾರ್ವಜನಿಕರು ತಿಳಿಸಿದ್ದು, ಈ ಕುರಿತು ಚರ್ಚಿಸಲಾಗಿ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಶೀಘ್ರದಲ್ಲೇ ರೂ.5 ಕೋಟಿ ಅನುದಾನದಲ್ಲಿ ಡಾರ್ಮಿಟರಿ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಹಾಗೂ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಚತೆ ಸಮಸ್ಯೆ ಕುರಿತು ಬಸ್ ಮಾಲೀಕರು ತಮ್ಮ ಗಮನಕ್ಕೆ ತಂದಿದ್ದು, ಪಾಲಿಕೆ ಆಯುಕ್ತರು ಅವರೊಂದಿಗೆ ಒಂದು ಸಭೆ ನಡೆಸಿ ಚರ್ಚಿಸುವಂತೆ ಸೂಚಿಸಿದರು.

ಜಿಲ್ಲಾ ಕಾರಾಗೃಹಕ್ಕೆ ಖೈದಿಗಳ ಬಂಧುಗಳು ಭೇಟಿ ನೀಡಲು ಬಸ್ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಕೇಳಿಕೊಂಡಿದ್ದು, ಕೆಎಸ್‌ಆರ್‌ಟಿಸಿ ವತಿಯಿಂದ ಖೈದಿಗಳ ಭೇಟಿ ಸಮಯದಲ್ಲಿ ಒಂದು ಬಸ್ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಪ್ರೊಫೆಸರ್ ಓರ್ವರ ವಿರುದ್ದ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯ ಮತ್ತು ಹಣ ಪಡೆದ ಪ್ರಕರಣ ಗಂಭೀರವಾಗಿದ್ದು ಈ ಬಗ್ಗೆ ವಿಶ್ವವಿದ್ಯಾಲಯದ ವತಿಯಿಂದ ಒಂದು ಸಮಿತಿ ರಚಿಸಿ ಪರಿಶೀಲಿಸಬೇಕು. ನಂತರ ಸಮರ್ಪಕವಾದ ವರದಿಯನ್ನು ಆಯೋಗಕ್ಕೆ ನೀಡಬೇಕೆಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಹೇಮಂತ್ ಎನ್, ಎಎಸ್ ಪಿ ಕಾರಿಯಪ್ಪ, ವನ್ಯಜೀವಿ ವಿಭಾಗದ ಡಿಸಿಎಫ್ ಪ್ರಸನ್ನ ಕೃಷ್ಣ ಪಟಗಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ದೂರುದಾರರು ಹಾಜರಿದ್ದರು.

Follow Us

Leave a Reply

Your email address will not be published. Required fields are marked *

Back to top button