ಹೊಸ ವರ್ಷಾಚರಣೆ ಸಂಭ್ರಮಕ್ಕೆ ಶಿವಮೊಗ್ಗ ಸಜ್ಜು!ಜಿಲ್ಲಾದ್ಯಂತ ಬಿಗಿ ಬಂದೋಬಸ್ತ|ನಿಯಮಾವಳಿ ಪಾಲಿಸುವಂತೆ ಆಯೋಜಕರಿಗೆ ಎಸ್.ಪಿ ಖಡಕ್ ಮಾರ್ಗಸೂಚಿ!
ಆಯೋಜಕರು ತೆಗೆದುಕೊಂಡ ಎಲ್ಲಾ ಮುಂಜಾಗೃತ ಕ್ರಮಗಳ ಮಾಹಿತಿಯನ್ನು ಆಯಾ ವ್ಯಾಪ್ತಿಯ ಠಾಣೆಗೆ ನೀಡಬೇಕು ಅಲ್ಲದೇ ಸುರಕ್ಷಿತವೆನಿಸುವ ಸಂಖ್ಯೆಯ ಸಾರ್ವಜನಿಕರಿಗೆ ಮಾತ್ರ ಪ್ರವೇಶ ನೀಡಬೇಕು ಎಂದು ಎಸ್.ಪಿ ಜಿ.ಕೆ.ಮಿಥುನ್ಕುಮಾರ್ ಸಲಹೆ ನೀಡಿದರು.

2026 ರ ಹೊಸ ವರುಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಆಗುವ ಅನಾಹುತಗಳನ್ನು ತಡೆಗಟ್ಟಲು ಹಾಗೂ ಮುನ್ನೆಚ್ಚರಿಕೆ ಕ್ರಮದ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಸೂಚಿಸಿರುವ ಕಟ್ಟುನಿಟ್ಟಿನ ಕ್ರಮಗಳನ್ನು ಕಡ್ಡಾಯವಾಗಿ ಆಳವಡಿಸಿಕೊಳ್ಳಬೇಕೆಂದು ಎಸ್.ಪಿ ಜಿ.ಕೆ.ಮಿಥುನ್ಕುಮಾರ್ ಖಡಕ ಸೂಚನೆ ನೀಡಿದ್ದಾರೆ.
ಮಂಗಳವಾರದಂದು ಈ ಕುರಿತು ಕರೆಯಲಾಗಿದ್ದ ಶಿವಮೊಗ್ಗ ಜಿಲ್ಲೆಯ ಹೋಟೆಲ್, ಲಾಡ್ಜ್, ರೆಸಾರ್ಟ್, ಹೋಂಸ್ಟೇ ಹಾಗೂ ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜಕರುಗಳ ಸಭೆಯಲ್ಲಿ ಅವರು ಮಾತನಾಡಿದರು.

ಶಿವಮೊಗ್ಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಹೊಸವರ್ಷಾಚರಣೆ ಭದ್ರತೆ ನಿಯಮ ಪಾಲನೆ ಜಾರಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.
ಸಂಭ್ರಮಾಚರಣೆಗೆ ಬರುವ ಅತಿಥಿಗಳ ಸುರಕ್ಷತೆ ಹಾಗೂ ಅವರಿಗೆ ಯಾವುದೇ ರೀತಿಯ ತೊಂದರೆಯಾಗದ ಸುರಕ್ಷಿತ ವಾತಾವರಣ ನಿರ್ಮಾಣ ಮೊದಲ ಆದ್ಯತೆಯಾಗಿರುವಂತೆ ತಿಳಿಸಿದ್ದಾರೆ.
ಹೊಸ ವರ್ಷದ ಆಚರಣೆಗಾಗಿ ಆಗಮಿಸುವ ಕುಟುಂಬಸ್ಥರು, ಮಹಿಳೆಯರು ಮಕ್ಕಳು ವಯಸ್ಸಾದವರ ಸುರಕ್ಷತೆಯೇ ಮೊದಲ ಆದ್ಯತೆಯಾಗಿದ್ದು ಯಾವುದೇ ಕಿರಿಕಿರಿ ಹಾಗೂ ತೊಂದರೆಯಾಗದಂತೆ ಆಯೋಜಕರು ನೋಡಿಕೊಳ್ಳಬೇಕಿದೆ.
ಸಮಾರಂಭಕ್ಕೆ ಹಾಜರಾಗುವ ಅತಿಥಿಗಳ ಸಂಖ್ಯೆ ಅಗತ್ಯ ಮಾಹಿತಿ ಸಂಗ್ರಹಿಸಿ ಆಯಾ ವ್ಯಾಪ್ತಿಯ ಠಾಣೆಗೆ ಮಾಹಿತಿ ನೀಡುವಂತೆ ಕಾರ್ಯಕ್ರಮದ ಆಯೋಜಕರಿಗೆ ಸೂಚನೆ ನೀಡಲಾಗಿದೆ.
ಕಾರ್ಯಕ್ರಮಕ್ಕೆ ಬರುವ ಅತಿಥಿಗಳ ಐಡಿ ಪ್ರೂಫ್ ಗಳನ್ನು ಪಡೆದುಕೊಳ್ಳತಕ್ಕದ್ದು. ಸುರಕ್ಷತೆಯ ದೃಷ್ಟಿಯಿಂದ ಸಿಸಿ ಕ್ಯಾಮೆರಗಳ ಅಳವಡಿಕೆ ಕಡ್ಡಾಯವಾಗಿದೆ.
ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಉಪಯೋಗ, ಮಾದಕ ವಸ್ತುಗಳ ಬಳಕೆ ಕಂಡು ಬಂದಲ್ಲಿ ಅಂತಹವರ ವಿರುದ್ಧ NDPS ಕಾಯ್ದೆ ರೀತ್ಯಾ ಕ್ರಮ ಜರುಗಿಸಲಾಗುವುದು ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ.
ಮದ್ಯಪಾನ ಮಾಡಿರುವವರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡದೆ ಆಯೋಜಕರೇ ವಾಹನ ವ್ಯವಸ್ಥೆ ಮಾಡುವುದು ಸೂಕ್ತವೆಂದು ಸೂಚಿಸಿದ್ದಾರೆ. ಮದ್ಯಪಾನ ಮಾಡಿರುವವರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡದೆ ಆಯೋಜಕರೇ ವಾಹನ ವ್ಯವಸ್ಥೆ ಮಾಡುವುದು ಸೂಕ್ತವೆಂದು ಸೂಚಿಸಿದ್ದಾರೆ.
ಪಟಾಕಿಗಳನ್ನು ಬಳಕೆ ಮಾಡುವಾಗ ಎಲ್ಲಾ ರೀತಿಯ ಸುರಕ್ಷತಾ ಕ್ರಮ ಅನುಸರಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಿಯೇ ಕಾರ್ಯಕ್ರಮ ನಡೆಸಬೇಕು . ಸಂಚಾರ ವ್ಯವಸ್ಥೆಗೆ ಯಾವುದೇ ದಕ್ಕೆಯಾಗದ ರೀತಿ ಪಾರ್ಕಿಂಗ್ ವ್ಯವಸ್ಥೆ ಮಾಡತಕ್ಕದ್ದು.
31ನೇ ತಾರೀಖಿನಂದು ರಾತ್ರಿ 12:00 ಗಂಟೆಗೆ ಶುರು ಮಾಡುವ ಸಂಭ್ರಮಾಚರಣೆಯನ್ನು 01:00 ಗಂಟೆಗೆ ಮುಕ್ತಾಯಗೊಳಿಸಬೇಕು. ಯಾವುದೇ ಅಗ್ನಿ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆಯೋಜಕರಿಗೆ ತಿಳಿಸಲಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳಾದ ಎ ಜಿ ಕಾರ್ಯಪ್ಪ, ರಮೇಶ್ ಕುಮಾರ್, ಜಿಲ್ಲೆಯ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಉಪಸ್ಥಿತರಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂ ಇಂಡಿಯಾ ಕನ್ನಡ
ಶಿವಮೊಗ್ಗ.

ಹೊಸವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಜನರಿಗೆ ಸಿಎಂ ಸಿದ್ದರಾಮಯ್ಯ ಸಂದೇಶ







