KarnatakaNationalNew DelhiPolitical

ಹೊಸ ಸಂಚಲನ ಮೂಡಿಸಿದ ನಿತೀನ್‌ ನಬೀನ್‌ ಕರ್ನಾಟಕ ಭೇಟಿ| ಸಂಘಟನೆ,ಕೋರ್‌ ಕಮಿಟಿ ಸಭೆಯಲ್ಲಿ ಭಾಗಿ|ಕಾಂಗ್ರೆಸ್‌ ಸರ್ಕಾರದಿಂದ ಅಭಿವೃದ್ಧಿ ವಿಫಲ ಆರೋಪ

ರಾಜ್ಯದ ಅಭಿವೃದ್ಧಿ ಮಾಡದೇ ಜನತೆಗೆ ದ್ರೋಹ ಬಗೆದಿದೆ. ರಾಜ್ಯ ಸರ್ಕಾರವು ಕಾಂಗ್ರೆಸ್‌ ಹೈಕಮಾಂಡಗೆ ಎಟಿಎಂ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‌ ಆರೋಪಿಸಿದರು.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿರುವ ನಿತಿನ ನಬೀನ್‌, ಭಾನುವಾರದಂದು ಪಕ್ಷದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಬೆಳಗ್ಗೆ ಮೊದಲಿಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪನವರ ಮನೆಗೆ ಭೇಟಿ ನೀಡಿದರು. ಬಿಎಸ್‌ವೈ ಅವರ ಪುತ್ರಿ ಹಾಗೂ ಸೊಸೆಯಂದಿರುವ ಆರತಿ ಬೆಳಗಿ ನಿತಿನ್‌ ನಬೀನ್‌ ಅವರನ್ನು ಸ್ವಾಗತಿಸಿದರು.

ಇದೇ ವೇಳೆ ಕೃಷ್ಣನ ಮೂರ್ತಿಯನ್ನು ನೀಡಿ ನಿತಿನ ನಬೀನ್‌ ಅವರನ್ನು ಸನ್ಮಾನಿಸಲಾಯಿತು.

ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿ, ಸಾರ್ವಜನಿಕ ಜೀವನದಲ್ಲಿ 50 ವರುಷಗಳ ಕಾಲ ಸುದೀರ್ಘ ಸೇವೆ ಹಾಗೂ ಜನಕಲ್ಯಾಣಕ್ಕಾಗಿ ಶ್ರಮಿಸಿದ್ದಾರೆ ಎಂದು ಬಿಎಸ್‌ ಯಡಿಯೂರಪ್ಪನವರನ್ನು ಇದೇ ವೇಳೆ ಅಭಿನಂದಿಸಿದರು.

ಬಹಳ ಹೊತ್ತು ಉಭಯ ಧುರೀಣರು ಸಂಘಟನೆ ಕುರಿತು ಇದೇ ವೇಳೆ ಚರ್ಚೆ ನಡೆಸಿದರು. ಬಳಿಕ ಯಡಿಯೂರಪ್ಪ ಅವರ ಜೊತೆಯಲ್ಲಿಯೇ ಉಪಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಡಿ.ವಿ. ಸದಾನಂದ ಗೌಡ, ಗೋವಿಂದ ಕಾರಜೋಳ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪನವರ ಭೇಟಿ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್‌ ನಬೀನ್‌ ನೇರವಾಗಿ ಮಲ್ಲೇಶ್ವರಂದಲ್ಲಿರುವ ಶ್ರೀ ಕಾಡುಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ, ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಎಸ್. ಆರ್. ವಿಶ್ವನಾಥ್, ಸಿ.ಕೆ.ರಾಮಮೂರ್ತಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ನಿತಿನ್‌ ನಬೀನ್‌, ಭಾರತ ಮಾತೆಯ ಭಾವಚಿತ್ರಕ್ಕೆ ಮತ್ತು ಜಗನ್ನಾಥ್ ರಾವ್ ಜೋಶಿ ಅವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ನಂತರ ನಡೆದ ಸಂಘಟನಾತ್ಮಕ ಸಭೆಯಲ್ಲಿ ಅವರು ಪಾಲ್ಗೊಂಡರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಪಕ್ಷದ ಸಂಸದರು, ಶಾಸಕರು, ಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬೀನ್‌ ಭಾಗವಹಿಸಿದ್ದರು.

ಮುಂಬರುವ ವಿಧಾನಸಭಾ ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಸಂಘಟನೆ ಕುರಿತು ಸಲಹೆ ಸೂಚನೆ ನೀಡಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಎಲ್ಲ ಕೋರ್‌ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.

ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಅಂಗವಾಗಿ ಯಲಹಂಕದ ಸಿಂಗನಾಯಕನಹಳ್ಳಿಯ ಖಾಸಗಿ ರೆಸಾರ್ಟ್‌ನಲ್ಲಿ ನಡೆದ ಬೆಂಗಳೂರು ಉತ್ತರ ಜಿಲ್ಲಾ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಪಾಲ್ಗೊಂಡಿದ್ದರು.

ಸಭೆಗೆ ಆಗಮಿಸಿದ ನಿತಿನ್‌ ನಬೀನ್‌ ಅವರನ್ನು ಪ್ರಶಿಕ್ಷಣ ವರ್ಗದ ಮಹಿಳಾ ವಿಭಾಗದ ಸದಸ್ಯರು ಆರತಿ ಬೆಳಗಿ ಸ್ವಾಗತಿಸಿದರು.

ಸಮಾರೋಪ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಬೈರತಿ ಬಸವರಾಜ್, ಶಾಸಕ ಎಸ್. ಆರ್. ವಿಶ್ವನಾಥ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ವೇಳೆ ಮಾಧ್ಯಮದವರೊಂದಿಗೆ ನಿತಿನ್‌ ನಬೀನ್‌ ಮಾತನಾಡಿದರು. ರಾಜ್ಯದ ಅಭಿವೃದ್ಧಿ ಮಾಡದೇ ಜನತೆಗೆ ದ್ರೋಹ ಬಗೆದಿದೆ. ರಾಜ್ಯ ಸರ್ಕಾರವು ಕಾಂಗ್ರೆಸ್‌ ಹೈಕಮಾಂಡಗೆ ಎಟಿಎಂ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‌ ಆರೋಪಿಸಿದರು.

ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಪಕ್ಷದ ಮುಖಂಡರೊಂದಿಗೆ ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್‌ ಕುರಿತು ಮಹತ್ವದ ಚರ್ಚೆ ನಡೆಸಿದರು.

ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನು ಈ ಮಧ್ಯೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರ ಜೊತೆ ನಿತಿನ್‌ ನಬೀನ್‌ ಸೌಹಾರ್ಧಯುತ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮತ್ತಿತರರು ಇದ್ದರು.

Follow Us

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button